ಜಿಲ್ಲಾಮಟ್ಟದ ಸ್ಪೀಡ್ ಸ್ಕೇಟಿಂಗ್ : ಅನಘಾಗೆ ಮೂರು ಚಿನ್ನದ ಪದಕ
Update: 2019-11-09 17:37 IST
ಮಂಗಳೂರು : ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನಲ್ಲಿ ಆಯೋಜಿಸಿದ ಸ್ಪೀಡ್ ಸ್ಕೇಟಿಂಗ್ ಜಿಲ್ಲಾಮಟ್ಟದ ಆಯ್ಕೆ ಸ್ಪರ್ಧೆಯಲ್ಲಿ ಅನಘಾ ಮೂರು ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
11 ವರ್ಷದೊಳಗಿನ ಬಾಲಕಿಯರ ವಿಭಾಗದ ಒಂದು ಲ್ಯಾಪ್, 500 ಮೀಟರ್ ರಿಂಕ್ ರೇಸ್ ಹಾಗೂ ಒಂದು ಲ್ಯಾಪ್ ರೋಡ್ ರೇಸ್ ನಲ್ಲಿ ಮೂರು ಚಿನ್ನದ ಪದಕ ಪಡೆದಿದ್ದಾರೆ.
ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂಡ್ಸ್ ಸೆಂಟ್ರಲ್ ಸ್ಕೂಲ್ ನ 4 ನೇ ತರಗತಿಯ ವಿದ್ಯಾರ್ಥಿನಿ. ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್. ಕೆ ಹಾಗೂ ಜಯರಾಜ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.