×
Ad

ನ.15ರಂದು ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆ

Update: 2019-11-09 20:05 IST

ಉಡುಪಿ, ನ.9: ಬೆಂಗಳೂರಿನ ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆ ಸಮಿತಿ ಹಾಗೂ ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದ ಸಹಯೋಗ ದಲ್ಲಿ ಭಕ್ತ ಕನಕದಾಸರ 532ನೇ ಜಯಂತಿ ಮಹೋತ್ಸವದ ಪ್ರಯುಕ್ತ ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆಯನು್ನ ನ.15ರಂದು ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 10:30ಕ್ಕೆ ಉಡುಪಿ ಜೋಡುಕಟ್ಟೆಯಿಂದ ಕೃಷ್ಣಮಠದ ಕನಕನ ಕಿಂಡಿಯವರೆಗೆ 751 ಮಹಿಳೆಯರಿಂದ ಕುಂಭ ಕಳಸ ಮೆರವಣಿಗೆ ನಡೆಯ ಲಿದ್ದು, ಇದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಚಾಲನೆ ನೀಡಲಿರುವರು ಎಂದು ರಥಯಾತ್ರೆ ಸಮಿತಿಯ ರಾಜ್ಯಾಧ್ಯಕ್ಷ ಓಂ.ಕೃಷ್ಣಮೂರ್ತಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಬಳಿಕ ಮೆರವಣಿಗೆಯೂ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಬರಲಿದ್ದು, ಇದರಲ್ಲಿ ಸುಮಾರು 2500 ಮಂದಿ ಸೇರುವ ನಿರೀಕ್ಷೆ ಇದೆ. ಮಧ್ಯಾಹ್ನ 12:30ಕ್ಕೆ ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ಸ್ವಾಮೀಜಿ ಕನಕದಾಸರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಿರುವರು. ಬಳಿಕ 1 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸ್ವಾಮೀಜಿ ಆಶೀರ್ವಚನ ನೀಡಲಿ ರುವರು. ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿರುವರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಮೇಟಿ ಮುದಿಯಪ್ಪ, ಅಧ್ಯಕ್ಷ ಹನುಮಂತ ಐಹೊಳೆ, ಮಾಜಿ ಅಧ್ಯಕ್ಷ ಹನುಮಂತ ಎಸ್.ಡೊಳ್ಳಿನ, ಪ್ರಧಾನ ಕಾರ್ಯದರ್ಶಿ ಗ್ಯಾನಪ್ಪ ಎಚ್.ಕುರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಗಮೇಶ ಆಸಂಗಿ, ಬಸವರಾಜ್ ಬೆಳಗಲ್ ಉಪಸ್ಥಿತರಿದ್ದರು.

ಕನಕ ಮಂದಿರ ಜೀರ್ಣೋದ್ಧಾರಕ್ಕೆ ಚಾಲನೆ

ಉಡುಪಿ ಕೃಷ್ಣಮಠದ ಕನಕ ಗೋಪುರದ ಎದುರಿನಲ್ಲಿರುವ ಕನಕ ಮಂದಿರ ವನ್ನು ಜೀರ್ಣೋದ್ಧಾರಗೊಳಿಸುವ ಕಾರ್ಯಕ್ಕೆ ನ.26 ಮತ್ತು 27ರಂದು ಚಾಲನೆ ನೀಡಲಾಗುವುದು ಎಂದು ಓಂ.ಕೃಷ್ಣಮೂರ್ತಿ ತಿಳಿಸಿದರು.

ತಮಿಳುನಾಡಿನ ಮಹಾಬಲಿಪುರಂನಲ್ಲಿ ಶಿಲಾ ಮಂಟಪದ ಕೆತ್ತನೆ ಕಾರ್ಯ ಶೇ.50ರಷ್ಟು ಮುಗಿದಿದ್ದು, ಮಂದಿರಕ್ಕಾಗಿ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ 25 ಲಕ್ಷ ರೂ. ದೇಣಿಗೆ ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ, ಮಂದಿರ ನಿರ್ಮಾಣಕ್ಕೆ ಆರ್ಥಿಕ ಸಹಕಾರ ನೀಡುವಂತೆ ಸರಕಾರಕ್ಕೆ ಮನವಿ ಮಾಡಿದ್ದೇವೆ. ಸಮಿತಿಯಿಂದ 10ಲಕ್ಷ ರೂ. ಮತ್ತು ಶ್ರೀಸಿದ್ಧರಾಮಾನಂದ ಕುರಿ ಸ್ವಾಮೀಜಿ 5ಲಕ್ಷ ರೂ. ದೇಣಿಗೆ ನೀಡಲಿದ್ದಾರೆ. 6-7ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News