​ಕಾರು ಢಿಕ್ಕಿ: ಪಾದಚಾರಿ ಮೃತ್ಯು

Update: 2019-11-09 16:38 GMT

ಬೈಂದೂರು, ನ.9: ಇಲ್ಲಿಗೆ ಸಮೀಪದ ಆಂಜನೇಯ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನ.8ರಂದು ರಾತ್ರಿ 10:20ರ ಸುಮಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಪಂಜು ಪೂಜಾರಿ ಎಂದು ಗುರುತಿಸಲಾಗಿದೆ. ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬಿಳಿ ಬಣ್ಣದ ಕಾರು ರಸ್ತೆಯ ಬದಿಯಲ್ಲಿ ನಿಂತಿದ್ದ ಪಂಜು ಪೂಜಾರಿಗೆ ಢಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿ ಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪಂಜು ಪೂಜಾರಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತ ಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News