ಆಯೋಧ್ಯೆ ತೀರ್ಪು ಹಿನ್ನೆಲೆ: ಮೈಸೂರಿನಲ್ಲಿ ನ.11ರವರೆಗೆ 144 ಸೆಕ್ಷನ್ ಜಾರಿ

Update: 2019-11-09 17:32 GMT

ಮೈಸೂರು,ನ.9: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಆದೇಶ ಹೊರಡಸಿದ್ದಾರೆ.

ಈದ್ ಮಿಲಾದ್ ಮತ್ತು ಕಾರ್ತೀಕ ಮಾಸದ ಪೂಜಾ ಆಚರಣೆಯನ್ನು ಹೊರತುಪಡಿಸಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಸಭೆಗಳನ್ನು ನಡೆಸದಂತೆ, ಬಂಟಿಂಗ್ಸ್ ಬಾವುಟಗಳನ್ನು, ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಪ್ರಚೋದನಾತ್ಮಕ ಘೋಷಣೆ ಕೂಗದಂತೆ, ಪಟಾಕಿ ಸಿಡಿಸದಂತೆ, ಸಿಹಿ ವಿತರಣೆ ಮಾಡುವುದನ್ನು ನಿಷೇಧಿಸಿ ಕಲಂ 144 ಸಿಆರ್ ಪಿಸಿ ರೀತಿ ಇಂದಿನಿಂದ ನ.11ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಸಭೆ-ಸಮಾರಂಭ, ಮೆರವಣಿಗೆಯನ್ನು ನಡೆಸಲು ಪ್ರಯತ್ನಿಸಿದಲ್ಲಿ ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News