ಬುಲ್‌ಬುಲ್ ಚಂಡಮಾರುತ: 1 ಲಕ್ಷ ಜನರನ್ನು ಸ್ಥಳಾಂತರಿಸಿದ ಬಾಂಗ್ಲಾ

Update: 2019-11-09 17:40 GMT
Photo: AFP

ಢಾಕ, ನ.9: ಬುಲ್‌ಬುಲ್ ಚಂಡಮಾರುತ ಶನಿವಾರ ರಾತ್ರಿ ಬಾಂಗ್ಲಾದೇಶದತ್ತ ಮುನ್ನುಗ್ಗುತ್ತಿರುವಂತೆಯೇ ಮುನ್ನೆಚ್ಚರಿಕೆಯ ಕ್ರಮವಾಗಿ ಕರಾವಳಿ ಪ್ರದೇಶ ಹಾಗೂ ತಗ್ಗು ಪ್ರದೇಶದಲ್ಲಿ ನೆಲೆಸಿರುವ ಸುಮಾರು 1 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ದೇಶದ ಎರಡು ಪ್ರಮುಖ ಬಂದರುಗಳಾದ ಮೋಂಗ್ಲ ಮತ್ತು ಚಿತ್ತಗಾಂಗ್‌ನ ಕಾರ್ಯ ನಿರ್ವಹಣೆಯನ್ನು ಸ್ಥಗಿತಗೊಳಿಸಲಾಗಿದೆ. ಸುಮಾರು 55000 ಸ್ವಯಂಸೇವಕರನ್ನು ನಿಯೋಜಿಸಲಾಗಿದ್ದು ಇವರು ಮನೆಮನೆಗೆ ತೆರಳಿ ಚಂಡಮಾರುತದ ಬಗ್ಗೆ ಜನರಲ್ಲಿ ಎಚ್ಚರ ಮೂಡಿಸಲಿದ್ದಾರೆ. ಶಾಲೆಗಳ ಪರೀಕ್ಷೆಯನ್ನು ಮುಂದೂಡಲಾಗಿದೆ ಮತ್ತು ಕರಾವಳಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಸರಕಾರಿ ಸಿಬಂದಿಗಳ ರಜೆಯನ್ನು ರದ್ದುಗೊಳಿಸಲಾಗಿದ್ದು ಕರ್ತವ್ಯಕ್ಕೆ ಮರಳುವಂತೆ ಸೂಚಿಸಲಾಗಿದೆ. ಅಲ್ಲದೆ ಸುಂದರ್‌ಬನ್ಸ್‌ನಲ್ಲಿ ನಡೆಯುವ ಸಾಂಪ್ರದಾಯಿಕ ಉತ್ಸವವನ್ನು ರದ್ದುಗೊಳಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News