×
Ad

ಶ್ರೀಸಾಮಾನ್ಯರ ಸಮ್ಮೇಳನ ‘ಸಮುದಾಯೋತ್ಸವ್ -2020’ ಲಾಂಛನ ಅನಾವರಣ

Update: 2019-11-10 17:37 IST

ಉಡುಪಿ, ನ.10: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ 2020 ಜ.19ರಂದು ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಆವರಣದಲ್ಲಿ ನಡೆಯಲಿರುವ ಧರ್ಮಪ್ರಾಂತ್ಯ ಮಟ್ಟದ ಶ್ರೀಸಾಮಾನ್ಯರ ಸಮ್ಮೇಳನ ಸಮುದಾಯೋತ್ಸವ್-2020 ಇದರ ಲಾಂಛನ ಅನಾವರಣ ಕಾರ್ಯಕ್ರಮ ರವಿವಾರ ಸಂಘಟನೆಯ ಸಭಾಭವನದಲ್ಲಿ ಜರಗಿತು.

ಲಾಂಛನವನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್ ಮತ್ತು ಕರ್ನಾಟಕ ರಾಜ್ಯ ಸೋಪ್ಸ್ ಮತ್ತು ಡಿಚರ್ಜಂಟ್ನ ಮಾಜಿ ಅಧ್ಯಕ್ಷೆ ವೆರೋನಿಕಾ ಕರ್ನೆಲಿಯೋ ಜಂಟಿಯಾಗಿ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್, ಕೆಥೊಲಿಕ್ ಸಭಾ ಸಂಘಟನೆ ಸಮಾಜದಲ್ಲಿ ತನ್ನ ಉತ್ತಮ ಕೆಲಸ ಗಳನ್ನು ಮಾಡುವುದರೊಂದಿಗೆ ಈ ಸಮ್ಮೇಳನದ ಮೂಲಕ ಸಮುದಾಯಗಳನ್ನು ಜೋಡಿಸುವ ಕೆಲಸ ನಡೆಸ ಬೇಕು. ಈ ನಿಟ್ಟಿನಲ್ಲಿ ಸಮ್ಮೇಳನ ಸಹಕಾರಿಯಾಗಬೇಕು ಎಂದು ಹೇಳಿದರು.

ಸಮ್ಮೇಳನದಲ್ಲಿ ಸುಮಾರು 3000 ಮಂದಿ ಭಾಗವಹಿಸುವ ನಿರೀಕ್ಷೆ ಹೊಂದ ಲಾಗಿದೆ. ಸಮ್ಮೇಳನವನ್ನು ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಉದ್ಘಾಟಿಸ ಲಿದ್ದು, ಸಮಾರೋಪದಲ್ಲಿ ಬೆಂಗಳೂರು ಮಹಾಧರ್ಮಕ್ಷೇತ್ರದ ಧರ್ಮಾ ಧ್ಯಕ್ಷ ವಂ.ಪೀಟರ್ ಮಚಾದೊ, ಮಹರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕಿ ಜೆನೆಟ್ ಡಿಸೋಜ ಭಾಗವಹಿಸಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ಜೀವಮಾನ ವಿಶೇಷ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು.

ಕಾರ್ಯಕ್ರಮದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಕಾರ್ಯದರ್ಶಿ ಸಂತೋಷ್ ಕರ್ನೆಲಿಯೋ, ಉಪಾಧ್ಯಕ್ಷ ಫ್ಲೈವನ್ ಡಿಸೋಜ, ನಿಯೋಜಿತ ಅಧ್ಯಕ್ಷ ರೊಬರ್ಟ್ ಮಿನೇಜಸ್, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್, ಸಮ್ಮೇಳನ ಸಂಚಾಲಕ ಎಲ್ರೋಯ್ ಕಿರಣ್ ಕ್ರಾಸ್ತಾ, ನಿಕಟಪೂರ್ವ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್, ಮಾಜಿ ಅಧ್ಯಕ್ಷರಾದ ಆಲ್ಫೋನ್ಸ್ ಡಿಕೋಸ್ತಾ, ವಾಲ್ಟರ್ ಸಿರಿಲ್ ಪಿಂಟೊ ಮೊದಲಾದವರು ಉಪಸ್ಥಿತರಿದ್ದರು.

ಆಲ್ವಿನ್ ಕ್ವಾಡ್ರಸ್ ಸ್ವಾಗತಿಸಿದರು. ಸಮುದಾಯೋತ್ಸವ್ ಸಮಿತಿಯ ಕಾರ್ಯದರ್ಶಿ ಮೇರಿ ಡಿಸೋಜ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News