ಸೇನಾ ಶಿಬಿರದಲ್ಲಿ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

Update: 2019-11-10 14:24 GMT
ಸಾಂದರ್ಭಿಕ ಚಿತ್ರ

ಲಕ್ನೊ, ನ.10: ಸಶಸ್ತ್ರ ಸೀಮಾ ಬಲ(ಎಸ್‌ಎಸ್‌ಬಿ)ದ 66ನೇ ಬಟಾಲಿಯನ್‌ನ ಯೋಧನೊಬ್ಬ ಸೇನಾ ಶಿಬಿರದಲ್ಲೇ ತನ್ನ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ಉತ್ತರಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯ ಹರ್ದಿದಲಿ ಶಿಬಿರದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ನಿವಾಸಿ ಬಶೀರ್ ಅಹ್ಮದ್ (32 ವರ್ಷ) ಆತ್ಮಹತ್ಯೆ ಮಾಡಿಕೊಂಡ ಯೋಧನಾಗಿದ್ದಾನೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News