ನ.11ರಂದು ವಿಟ್ಲದಲ್ಲಿ ವಿದ್ಯುತ್ ವ್ಯತ್ಯಯ

Update: 2019-11-10 15:42 GMT

ವಿಟ್ಲ, ನ. 10: ವಿಟ್ಲ ಭಾಗದ ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ನ.11 ರಂದು ನಿರ್ವಹಣೆ ಕಾಮಗಾರಿ ನಡೆಸಲಿರುವುದರಿಂದ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಕಾವೂರು ಕೆಪಿಸಿಟಿಎಲ್‌ನ ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಟ್ಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರ್‌ಗಳ ವಿದ್ಯುತ್ ವ್ಯತ್ಯಯವಾಗುವುದರಿಂದ ಈ ಭಾಗದ ವಿದ್ಯುತ್ ಬಳಕೆದಾರರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟನೆಯಲ್ಲಿ ಕೋರಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News