ರಾಜಧಾನಿ ಬೆಂಗಳೂರಿನಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ

Update: 2019-11-10 16:58 GMT

ಬೆಂಗಳೂರು, ನ.10: ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಅಂಗವಾಗಿ ಆಚರಿಸುವ ಮೀಲಾದುನ್ನಬಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. 

ನಗರದ ಕೆ.ಆರ್.ಮಾರುಕಟ್ಟೆ, ಗೋರಿಪಾಳ್ಯ, ಮೈಸೂರು ರಸ್ತೆ, ಜಯನಗರ, ಕೋರಮಂಗಲ, ಜಾನ್ಸನ್‌ಮಾರ್ಕೆಟ್, ಕಲಾಸಿಪಾಳ್ಯ, ಚಿಕ್ಕಪೇಟೆ, ಶಿವಾಜಿನಗರ, ಟ್ಯಾನರಿ ರಸ್ತೆ, ನಾಗವಾರ, ಹಲಸೂರು, ಇಂದಿರಾನಗರ ಸೇರಿದಂತೆ ವಿವಿಧ ಪ್ರದೇಶಗಳಿಂದ ಮುಸ್ಲಿಮ್ ಬಾಂಧವರು ಸ್ಥಬ್ಧ ಚಿತ್ರಗಳ ಮೆರವಣಿಗೆಯನ್ನು ನಡೆಸಿದರು. ಪ್ರಮುಖ ಮಸೀದಿ, ಮದ್ರಸಾಗಳಲ್ಲಿ ಬಡವರಿಗೆ ಅನ್ನದಾನವನ್ನು ಏರ್ಪಡಿಸಲಾಗಿತ್ತು.

ನಗರದ ವಿವಿಧ ಭಾಗಗಳಿಂದ ಆಗಮಿಸಿದ ಮೆರವಣಿಗೆಗಳು, ನೃಪತುಂಗ ರಸ್ತೆಯಲ್ಲಿರುವ ವೈಎಂಸಿಎ ಕ್ರೀಡಾಂಗಣದಲ್ಲಿ ಸಮಾವೇಶಗೊಂಡವು. ಮೆರವಣಿಗೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅಲ್ಲದೆ, ಪ್ರಮುಖ ರಸ್ತೆಗಳಲ್ಲಿ ಸಂಚಾರವನ್ನು ಮಾರ್ಪಾಡು ಮಾಡಲಾಗಿತ್ತು. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News