ಚುನಾವಣೆ: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಲಾ-ಕಾಲೇಜು, ಉದ್ಯಮ ಸಂಸ್ಥೆಗಳಿಗೆ ನ.12ರಂದು ರಜೆ

Update: 2019-11-11 13:04 GMT

ಮಂಗಳೂರು, ನ.11: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾರರಿಗೆ ಮತದಾನ ಮಾಡಲು ಅವಕಾಶವಾಗುವಂತೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಎಲ್ಲ ರಾಜ್ಯ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆ ಒಳಗೊಂಡಂತೆ) ಮತ್ತು ಸರಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ನ.12ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪೆನಿಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಡಲು ಅನುಕೂಲವಗುವಂತೆ ವೇತನ ಸಹಿತ ರಜೆ ನೀಡಲು ಆದೇಶಿಸಿದೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News