ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಶಿವಸೇನೆಗೆ ಕಾಂಗ್ರೆಸ್ ಬೆಂಬಲ

Update: 2019-11-11 13:53 GMT

ಹೊಸದಿಲ್ಲಿ, ನ.11: ಮಹಾರಾಷ್ಟ್ರದಲ್ಲಿ ಎನ್ ಸಿಪಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಶಿವಸೇನೆಯು ನೂತನ ಸರಕಾರ ರಚಿಸಲಿದೆ ಎಂದು ವರದಿಯಾಗಿದೆ. ಈಗಾಗಲೇ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಸೋನಿಯಾ ಗಾಂಧಿ ಜೊತೆ ಮಾತನಾಡಿದ್ದು, ಶಿವಸೇನೆಗೆ ಬೆಂಬಲ ನೀಡಲು ಕಾಂಗ್ರೆಸ್ ಕೊನೆಗೂ ಒಪ್ಪಿದೆ ಎನ್ನಲಾಗಿದೆ.

ಈ ಬೆಳವಣಿಗೆಯ ನಂತರ ಆದಿತ್ಯ ಠಾಕ್ರೆ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆಯ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಯವರನ್ನು ಭೇಟಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News