ನ.17ರಂದು ಎಐಎಂಪಿಎಲ್‌ಬಿ ಸಭೆಯಲ್ಲಿ ಅಯೋಧ್ಯೆ ತೀರ್ಪಿನ ಕುರಿತು ನಿರ್ಧಾರ

Update: 2019-11-11 15:30 GMT
ಫೋಟೊ: PTI

 ಹೊಸದಿಲ್ಲಿ,ನ.11: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ)ಯು ನ.17ರಂದು ನಡೆಯಲಿರುವ ತನ್ನ ಸಭೆಯಲ್ಲಿ ಅಯೋಧ್ಯೆ ತೀರ್ಪಿನ ಪುನರ್‌ಪರಿಶೀಲನೆಯನ್ನು ಕೋರಬೇಕೇ ಎಂಬ ಬಗ್ಗೆ ನಿರ್ಧಾರವೊಂದನ್ನು ಕೈಗೊಳ್ಳುವ ಸಾಧ್ಯತೆಯಿದೆ ಎಂದು ಪ್ರಕರಣದಲ್ಲಿ ಮುಸ್ಲಿಂ ಕಕ್ಷಿದಾರರ ಪರ ವಾದಿಸಿದ್ದ ಹಿರಿಯ ವಕೀಲ ಝಫ್ರಯಾಬ್ ಜಿಲಾನಿ ಅವರು ತಿಳಿಸಿದ್ದಾರೆ.

ಸಮುದಾಯದ ಕೆಲವು ವರ್ಗಗಳಲ್ಲಿ ಅತೃಪ್ತಿಯ ಹಿನ್ನೆಲೆಯಲ್ಲಿ ತೀರ್ಪಿನ ಪುನರ್‌ಪರಿಶೀಲನೆಯನ್ನು ಕೋರಲು ಮುಸ್ಲಿಂ ಕಕ್ಷಿದಾರರು ಚಿಂತನೆ ನಡೆಸಿದ್ದಾರೆಯೇ ಎಂಬ ಸುದ್ದಿಸಂಸ್ಥೆಯ ಪ್ರಶ್ನೆಗೆ ಜಿಲಾನಿ ಉತ್ತರಿಸುತ್ತಿದ್ದರು. ಜಿಲಾನಿ ಅವರು ವಿಚಾರಣಾ,ಅಲಹಾಬಾದ ಉಚ್ಚ ಮತ್ತು ಸರ್ವೋಚ್ಚ ನ್ಯಾಯಾಲಯಗಳಲ್ಲಿ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಸೇರಿದಂತೆ ಮುಸ್ಲಿಂ ಕಕ್ಷಿಗಳನ್ನು ಪ್ರತಿನಿಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News