ಕೋಟ: ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

Update: 2019-11-11 17:41 GMT

ಉಡುಪಿ, ನ.11:ಜಿಲ್ಲೆಯಲ್ಲಿ ಕೋಟ್ಪಾ-2003ರ ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿ ಯಿಂದ ತಾಲೂಕಿನ ಕೋಟ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ 20 ಪ್ರಕರಣ ದಾಖಲಿಸಿ 3200ರೂ. ದಂಡ ವಸೂಲಿ ಮಾಡಲಾಯಿತು.

ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಹಿರಿಯ ಆರೋಗ್ಯ ಮೇಲ್ವಿಚಾರಕ ಕೃಷ್ಣಪ್ಪ, ಹಿರಿಯ ಆರೋಗ್ಯ ಸಹಾಯಕ ದೇವಪಟ್ಟ ಪಟಗರ್, ಉಟುಪಿ ಕೋಟ ಪೊಲೀಸ್ ಠಾಣೆಯ ಆರಕ್ಷಕ ಮಂಜುನಾಥ, ರಾಷ್ಟ್ರೀಯ ತಂಬಾಕು ನಿಯಂತ್ರಣಾ ಘಟಕದ ವತಿ ಯಿಂದ ಎನ್‌ಟಿಸಿಪಿ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಎನ್‌ಸಿಡಿ ಜಿಲ್ಲಾ ಸಂಯೋಜಕ ಡಾ.ಅಪನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News