ಜಮ್ಮುಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ

Update: 2019-11-11 18:09 GMT

ಶ್ರೀನಗರ, ನ. 10: ಜಮ್ಮು ಹಾಗೂ ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ರವಿವಾರದಿಂದ ಇಲ್ಲಿ ಎನ್‌ಕೌಂಟರ್ ನಡೆಯುತ್ತಿದೆ.

ಶ್ರೀನಗರದಿಂದ 55 ಕಿ.ಮೀ. ದೂರದಲ್ಲಿರುವ ಲಾವ್‌ದಾರಾ ಗ್ರಾಮದಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ರವಿವಾರ ಓರ್ವ ಉಗ್ರ ಹತನಾಗಿದ್ದಾನೆ. ಇನ್ನೋರ್ವ ಉಗ್ರ ಸೋಮವಾರ ಸಂಜೆ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ಎನ್‌ಕೌಂಟರ್ ನಡೆದ ಸ್ಥಳದಿಂದ ಪತ್ತೆ ಮಾಡಲಾಗಿದೆ ಉಗ್ರರು ಗುರುತು ಹಾಗೂ ಅವರು ಸೇರಿದ ಸಂಘಟನೆ ಬಗ್ಗೆ ಇನ್ನಷ್ಟೆ ಮಾಹಿತಿ ತಿಳಿಯಬೇಕಿದೆ ಎಂದು ಅವರು ಹೇಳಿದ್ದಾರೆ.

ಕೆಲವು ಭಯೋತ್ಪಾದಕರು ಅಡಗಿರುವ ನಿರ್ದಿಷ್ಟ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆ ಆ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಯೋಧರು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News