ಜಾಹೀರಾತು ನೀಡದ ಬಿಬಿಎಂಪಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ: ಹೈಕೋರ್ಟ್ ಎಚ್ಚರಿಕೆ

Update: 2019-11-11 18:42 GMT

ಬೆಂಗಳೂರು, ನ.11: ನಗರದಲ್ಲಿ ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ತೊಂದರೆಗೆ ಒಳಗಾದವರಿಗೆ ಪರಿಹಾರ ನೀಡುವ ಕುರಿತು ಪತ್ರಿಕೆಗಳಲ್ಲಿ ಜಾಹೀರಾತು ನೀಡದ ಬಿಬಿಎಂಪಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವುದಾಗಿ ಸೋಮವಾರ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ನಗರದಲ್ಲಿ ರಸ್ತೆಗುಂಡಿಯಿಂದ ಅಪಘಾತ ಸಂಭವಿಸಿ ಗಾಯಗೊಂಡ ಸಾರ್ವಜನಿಕರು ಪರಿಹಾರ ಕೋರಿ ಬಿಬಿಎಂಪಿಗೆ ಮನವಿ ಪತ್ರ ಸಲ್ಲಿಸಬಹುದು. ಮನವಿಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ಪರಿಹಾರ ನೀಡುವ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕೆಂದು ನಿರ್ದೇಶನ ನೀಡಿತ್ತು. ಆದರೆ, ಪಾಲಿಕೆಯು ಇಲ್ಲಿಯವರೆಗೆ ಪರಿಹಾರದ ಬಗ್ಗೆ ಜಾಹೀರಾತು ನೀಡದ ಹಿನ್ನೆಲೆಯಲ್ಲಿ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿ ಬಿಬಿಎಂಪಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News