ಮಂಗಳೂರು ಮನಪಾ ಚುನಾವಣೆ: ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

Update: 2019-11-12 07:14 GMT

ಮಂಗಳೂರು, ನ.12: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಫಳ್ನೀರ್ ವಾರ್ಡಿನ ಜೆಪ್ಪು ಮತಗಟ್ಟೆಯ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿರುವುದು ವರದಿಯಾಗಿದೆ.
ಮತಗಟ್ಟೆಯ ಬಳಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮತದಾರರನ್ನು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.
ಚುನಾಯಿತ ಪ್ರತಿನಿಧಿಗಳು ಮತಗಟ್ಟೆ ಬಳಿ ಹಾಜರಿರುಉವದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಐವನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದು ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿಗೆ ಕಾರಣವಾಯಿತು.
ಮತದಾರರನ್ನು ಸೆಳೆಯಲು ನಾವು ಶಾಸಕರು ಹಾಗೂ ಸಂಸದರನ್ನು ಸ್ಥಳಕ್ಕೆ ಕರೆಯುತ್ತೆವೆ ಎಂದ ಬಿಜೆಪಿ ಕಾರ್ಯಕರ್ತರು ಸವಾಲು ಹಾಕಿದರು.
ಬಳಿಕ ಪೊಲೀಸರು ಮಧ್ಯೆಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News