ನಿಷೇಧಿತ ಪ್ಲಾಸ್ಟಿಕ್ ಬಳಕೆ: ಬಿಬಿಎಂಪಿ ವಸೂಲಿ ಮಾಡಿದ ದಂಡ ಎಷ್ಟು ಕೋಟಿ ರೂ. ಗೊತ್ತಾ ?

Update: 2019-11-12 14:03 GMT

ಬೆಂಗಳೂರು, ನ.12 : ಕಳೆದ ಎಪ್ರಿಲ್‌ನಿಂದ ಅಕ್ಟೋಬರ್ ಅಂತ್ಯದವರೆಗೆ ಪರಿಸರಕ್ಕೆ ಮಾರಕವಾಗುವ 37 ಸಾವಿರ ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಅನ್ನು ಬಿಬಿಎಂಪಿಯ ಅಧಿಕಾರಿಗಳು ವಶ ಪಡಿಸಿಕೊಂಡಿದ್ದು, 2.12 ಕೋಟಿ ರೂ. ದಂಡ ವಸೂಲಿ ಮಾಡಿದ್ದಾರೆ.

ನಿಷೇಧಿತ ಪ್ಲಾಸ್ಟಿಕ್ ಅಭಿಯಾನದಲ್ಲಿ ಕಳೆದ ಎಪ್ರಿಲ್‌ನಿಂದ ಅಕ್ಟೋಬರ್ ಅಂತ್ಯದವರೆಗೆ ಬಿಬಿಎಂಪಿಯ ಎಂಟು ವಲಯದ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿ ಬ್ಯಾಗ್, ಸ್ಪೂನ್, ಪ್ಲೇಟ್ ಸೇರಿದಂತೆ ಇನ್ನಿತರ ಮಾರಾಟ ಮಳಿಗೆ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುವ ಹೊಟೇಲ್, ರೆಸ್ಟೋರೆಂಟ್, ಅಂಗಡಿ ಮುಂಗಟ್ಟುಗಳ ಮೇಲೆ ಬಿಬಿಎಂಪಿ ಸಾರ್ವಜನಿಕ ಆರೋಗ್ಯ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದು, ಒಟ್ಟು 37,577 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಅನ್ನು ವಶಕ್ಕೆ ಪಡೆದಿದ್ದಾರೆ. ನಿಷೇಧಿತ ಪ್ಲಾಸ್ಟಿಕ್ ಮಾರಾಟಗಾರರಿಂದ 2,12,39,141 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ ಡಿ. ರಂದೀಪ್ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News