​19ಕ್ಕೆ ಶಿಕ್ಷಕರ ನೇಮಕಾತಿಗೆ ದಾಖಲೆಗಳ ಪರಿಶೀಲನೆ

Update: 2019-11-12 15:28 GMT

ಉಡುಪಿ, ನ.12: 2019-20ನೇ ಸಾಲಿನ ಸರಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಅರ್ಹರಾದ ಅ್ಯರ್ಥಿಗಳ 1:2 ಅನುಪಾತದ ಪಟ್ಟಿಯನ್ನು ಈಗಾಗಲೇ ಇಲಾಖಾ ವೆಬ್‌ಸೈಟ್‌ನಲ್ಲಿ ಬೆಂಗಳೂರು ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಪ್ರಕಟಿಸಿದ್ದಾರೆ.

ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನ.19 ಮತ್ತು 20ರಂದು ಮಣಿಪಾಲದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಅ್ಯರ್ಥಿಗಳು ಸಮರ್ಪಕ ಮೂಲ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಗೆಜೆಟೆಡ್ ಅಧಿಕಾರಿಗಳ ದೃಢೀಕೃತ ಪ್ರತಿ, ತಮ್ಮ ಇತ್ತೀಚಿನ 2 ಭಾವಚಿತ್ರ, ಸ್ವ-ವಿಳಾಸ ಮಾಹಿತಿ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯ ಮಾಹಿತಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನಿಗದಿಪಡಿಸಿದ ದಿನದಂದು ಪರಿಶೀಲನೆಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ:0820-2574878ನ್ನು ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News