16ಕ್ಕೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ
Update: 2019-11-12 21:07 IST
ಉಡುಪಿ, ನ.12: ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಾಗೂ ಡಿಜಿಟಲ್ ಗ್ರಂಥಾಲಯಗಳ ಮಹತ್ವ ಮಾಹಿತಿ ಕಾರ್ಯಾಗಾರ ನ.16ರ ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.