ಉಡುಪಿ: ಕೇಂದ್ರ ಸರಕಾರದ ವಿರುದ್ಧ ನ.14ರಂದು ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

Update: 2019-11-12 16:14 GMT

ಉಡುಪಿ, ನ.12: ಕೇಂದ್ರ ಸರಕಾರದ ಜನವಿರೋಧಿ ಆರ್ಥಿಕ ನೀತಿ, ನಿರುದ್ಯೋಗ ಸಮಸ್ಯೆ, ಉದ್ದಿಮೆಗಳ ಮುಚ್ಚುಗಡೆ, ಕೃಷಿ ಬಿಕ್ಕಟ್ಟು, ಬ್ಯಾಂಕ್ ವಂಚನೆ, ಕಪ್ಪುಹಣ ತರುವಲ್ಲಿ ವಿಫಲ ಹಾಗೂ ಕೇಂದ್ರ ಸರಕಾರದ ಸ್ವಾಮ್ಯದಲ್ಲಿರುವ ಸಂಸ್ಥೆಗಳನ್ನು ಖಾಸಗಿಗಳಿಗೆ ನೀಡುವ ವಿರುದ್ಧ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಆದೇಶದಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಜೋಡುಕಟ್ಟೆಯಲ್ಲಿ ನ.14ರ ಬೆಳಗ್ಗೆ 10:00 ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಯು. ಆರ್. ಸಭಾಪತಿ, ಗೋಪಾಲ ಪೂಜಾರಿ, ಕಾರ್ಯಕ್ರಮದ ಉಸ್ತುವಾರಿ ಮತ್ತು ಎಐಸಿಸಿ ಸದಸ್ಯ ಪಿ.ವಿ. ಮೋಹನ್ ಹಾಗೂ ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ವಿವಿಧ ಬ್ಲಾಕ್ ಅಧ್ಯಕ್ಷರು, ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News