ಮಾಣಿ ಬಾಲವಿಕಾಸ ಶಾಲೆಯಲ್ಲಿ ನೇತ್ರ ತಪಾಸಣೆ ಶಿಬಿರ

Update: 2019-11-12 17:20 GMT

ಬಂಟ್ವಾಳ, ನ.12: ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಲಯನ್ಸ್ ಕ್ಲಬ್ ಮಾಣಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ, ಮಾಣಿ ವಲಯ, ಯುವಕ ಮಂಡಲ ಮಾಣಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇವುಗಳ ಜಂಟಿ ಆಶ್ರಯದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ನಡೆಯಿತು.

ಆನಂದಾಶ್ರಮ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ. ಗೌರಿ ಪೈ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಲಯನ್ಸ್ ಕ್ಲಬ್ ಮಾಣಿ ಇದರ ಅಧ್ಯಕ್ಷ ಗಂಗಾಧರ ರೈ.ಪಿ., ನೇತ್ರಾಧಿಕಾರಿ ಶಾಂತರಾಜ್, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿದರು.

ಶಾಲಾ ಸಂಚಾಲಕ ಜೆ.ಪ್ರಹ್ಲಾದ್ ಶೆಟ್ಟಿ, ಅಧ್ಯಕ್ಷ ಡಾ. ಬಿ.ಎಸ್. ನಾಯ್ಕ್, ಶಿಬಿರದ ನಿರ್ದೇಶಕ ಡಾ.ಎ.ಮನೋಹರ ರೈ, ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಎಂ.ಕಿರಣ್ ಹೆಗ್ಡೆ, ಮಾಣಿ ಯುವಕ ಮಂಡಲದ ಅಧ್ಯಕ್ಷ ಕೆ.ಸುದೀಪ್ ಕುಮಾರ್ ಶೆಟ್ಟಿ, ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇದರ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಡಾ. ಶ್ರೀನಾಥ್ ಆಳ್ವ ಪೆರಾಜೆಗುತ್ತು, ಡಾ. ಶಶಿಕಲಾ, ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯ ನೇತ್ರಾಧಿಕಾರಿ ಮಂಜುಳ, ವೈದ್ಯಾಧಿಕಾರಿ ಡಾ. ಆ್ಯನ್ಶೆಲ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನಾ ಹಾಜರಿದ್ದರು.

ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್ ಸ್ವಾಗತಿಸಿ, ಲಯನ್ಸ್ ಕ್ಲಬ್ ಮಾಣಿ ಇದರ ಕಾರ್ಯದರ್ಶಿ ಉಮೇಶ್.ಪಿ. ವಂದಿಸಿದರು. ಶಿಕ್ಷಕಿ ಸುಧಾ.ಎನ್. ರಾವ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News