ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ: ಇಬ್ಬರು ಸವಾರರು ಮೃತ್ಯು

Update: 2019-11-12 17:47 GMT

ವಿಜಯಪುರ, ನ.12: ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಹೊರ ಭಾಗದಲ್ಲಿ ನಡೆದಿದೆ.

ಪೂಜಪ್ಪ ಮಿಣಜಗಿ (38) ಹಾಗೂ ಭೀಮಣ್ಣ ಹುಲಿಮನಿ (42 ) ಮೃತರು. ಓರ್ವ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಮೃತರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅಗ್ನಿ ಗ್ರಾಮದವರು ಎಂದು ತಿಳಿದುಬಂದಿದ್ದು, ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News