ಏಕದಿನ ರ್ಯಾಂಕಿಂಗ್: ಅಗ್ರಸ್ಥಾನ ಕಾಯ್ದುಕೊಂಡ ಕೊಹ್ಲಿ, ಬುಮ್ರಾ

Update: 2019-11-13 05:42 GMT

ದುಬೈ, ನ.12: ಭಾರತದ ನಾಯಕ ವಿರಾಟ್ ಕೊಹ್ಲಿ ಹಾಗೂ ಜಸ್‌ಪ್ರೀತ್ ಬುಮ್ರಾ ಐಸಿಸಿ ಏಕದಿನ ಆಟಗಾರರ ರ್ಯಾಂಕಿಂಗ್‌ನಲ್ಲಿ ಕ್ರಮವಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಕೊಹ್ಲಿ 895 ರೇಟಿಂಗ್ ಪಾಯಿಂಟ್ಸ್‌ನೊಂದಿಗೆ ರ್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನ ಉಳಿಸಿಕೊಂಡರು. 2019ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ರ್ಯಾಂಕಿಂಗ್‌ನಲ್ಲಿ ಬುಮ್ರಾ 797 ರೇಟಿಂಗ್ ಪಾಯಿಂಟ್ಸ್ ಗಳಿಸಿ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ. ನ್ಯೂಝಿಲ್ಯಾಂಡ್‌ನ ಟ್ರೆಂಟ್ ಬೌಲ್ಟ್ ಎರಡನೇ ಸ್ಥಾನದಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ 246 ರೇಟಿಂಗ್ ಪಾಯಿಂಟ್ಸ್‌ನೊಂದಿಗೆ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರ-10ರಲ್ಲಿ ಸ್ಥಾನ ಪಡೆದಿರುವ ಭಾರತದ ಏಕೈಕ ಆಟಗಾರನಾಗಿದ್ದಾರೆ. ಇಂಗ್ಲೆಂಡ್‌ನ ವಿಶ್ವಕಪ್ ಹೀರೋ ಬೆನ್ ಸ್ಟೋಕ್ಸ್ 319 ರೇಟಿಂಗ್ ಪಾಯಿಂಟ್ಸ್‌ನೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಅಫ್ಘಾನಿಸ್ತಾನದ ಮುಹಮ್ಮದ್ ನಬಿ ಎರಡನೇ ಸ್ಥಾನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News