ಶಿರ್ವ: ವಿಕಾಸ ವಿಜ್ಞಾನ ಪ್ರದರ್ಶನ -2019 ಉದ್ಘಾಟನೆ

Update: 2019-11-13 14:33 GMT

ಶಿರ್ವ, ನ.13: ಶಿರ್ವದ ಹಿಂದೂ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವತಿಯಿಂದ ‘ವಿಕಾಸ’ ವಿಜ್ಞಾನ ಪ್ರದರ್ಶನವನ್ನು ಇತ್ತೀಚೆಗೆ ಶಾಲೆಯಲ್ಲಿ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ. ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಯಲ್ಲಿಯೂ ಪ್ರತಿಭೆ ಇದೆ. ಅವರಿಗೆ ವೇದಿಕೆ ಮತ್ತು ಅವಕಾಶ ಒದಗಿಸಿದಾಗ ಮಾತ್ರ ಅದು ಬೆಳೆಯಲು ಸಾಧ್ಯ ವಾಗುತ್ತದೆ. ಪಟ್ಟಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿರುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪ್ರತಿಭಾ ವಿಕಸನಕ್ಕೆ ಹೆಚ್ಚು ಒತ್ತು ನೀಡುವ ಅಗತ್ಯವಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿ. ಸುಬ್ಬಯ್ಯ ಹೆಗ್ಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ವಿಜ್ಞಾನ ಶಿಕ್ಷಕ ವರದರಾಯ ವಿ. ನಾಯಕ್, ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ, ಹಿಂದೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಎ. ಮಾತನಾಡಿದರು.

ಕಾರ್ಯಕ್ರಮದ ಸಂಯೋಜಕ ಕೇಶವ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಶಿಕ್ಷಕಿ ಶಕೀಲ ಸ್ವಾಗತಿಸಿದರು. ಶಿಕ್ಷಕ ಗಣೇಶ್ ವಂದಿಸಿದರು. ಶಿಕ್ಷಕಿ ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕಿನ 16 ಶಾಲೆಗಳ 580 ವಿದ್ಯಾರ್ಥಿಗಳು ಪಾಲ್ಗೊಂಡು ವಿಜ್ಞಾನಕ್ಕೆ ಪೂರಕವಾದ ಮಾದರಿಗಳನ್ನು, ಸ್ಪರ್ಧೆಗಳನ್ನು ಮತ್ತು ವಸ್ತು ಪ್ರದರ್ಶನವನ್ನು ವೀಕ್ಷಿಸಿರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News