ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ವಿವಿಧ ಸ್ಪರ್ಧೆ

Update: 2019-11-13 14:37 GMT

ಉಡುಪಿ, ನ.13:ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾನದ ಮಹತ್ವದ ಅರಿವು ಕಾರ್ಯಕ್ರಮ, ಮತದಾನದ ಪ್ರಮಾಣವನ್ನು ಹೆಚ್ಚಿಸುವಲ್ಲಿ ಉತ್ತಮ ಯೋಜನೆಯಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆಯ ಬೇಕು ಮತ್ತು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕು ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಎಸ್. ಹೆಗ್ಡೆ ತಿಳಿಸಿದ್ದಾರೆ.

ಮಂಗಳವಾರ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣಾ ಆಯೋಗದ ಆದೇಶದಂತೆ ಜಿಲ್ಲಾಡಳಿತದ ಸಹಯೋಗದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವಬಾವಿಯಾಗಿ ನಡೆದ ಜಿಲ್ಲಾಮಟ್ಟದ ಪ್ರಬಂಧ, ನಾಟಕ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ.ಸುರೇಶ್ ರೈ ಕೆ. ಮಾತನಾಡಿ, ಜಗತ್ತಿನ ಅತೀದೊಡ್ಡ ಪ್ರುತ್ವ ರಾಷ್ಟ್ರವಾದ ಭಾರತದಲ್ಲಿ ಪ್ರಜಾಪ್ರುತ್ವ ಇನ್ನಷ್ಟು ಯಶಸ್ವಿಯಾಗಬೇಕಾದರೆ ಮತದಾರರು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಯೋಗ್ಯ ಅ್ಯರ್ಥಿಗಳನ್ನು ಆರಿಸಬೇಕು. ಮತದಾನದ ಅಂಕಿಅಂಶ ವನ್ನು ನೋಡಿದರೆ ವಿದ್ಯಾವಂತರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡದಿ ರುವುದು ಕಂಡುಬರುತ್ತದೆ ಎಂದರು.

ಕೋಟೇಶ್ವರ ಕಾಲೇಜಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಜ್ಯೋತಿ, ತೆಂಕನಿಡಿಯೂರುಕಾಲೇಜಿನ ಅರ್ಥಶಾಸ್ತ್ರ ಸಹಪ್ರಾಧ್ಯಾಪಕ ಡಾ. ಗೋಪಾಲಕೃಷ್ಣ ಎಂ ಗಾಂವ್ಕರ್ ಉಪಸ್ಥಿತರಿದ್ದರು. 1990-96ರ ಅವಧಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಕ್ರಾಂತಿಯನ್ನು ಮಾಡಿ ನ.10ರಂದು ನಿಧನರಾದ ಟಿ.ಎನ್.ಶೇನ್‌ರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಸಂಚಾಲಕ ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಪುಲ್ಲ ಸ್ವಾಗತಿಸಿ, ಅಶ್ವಿಜ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News