ಜಾಲ್ಸೂರು ಬಳಿ ಅಪಘಾತ: ಬೈಕ್ ಸವಾರ ಮೃತ್ಯು

Update: 2019-11-13 16:14 GMT

ಸುಳ್ಯ: ಜಾಲ್ಸೂರು ಗ್ರಾಮದ ಮುರೂರು ಬಳಿ ಕಾರೊಂದು ಬೈಕ್‍ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.

ಮುರೂರಿನ ಬಾಬು ನಾಯರ್ (56) ಮೃತರು ಎಂದು ಗುರುತಿಸಲಾಗಿದೆ. 

ಅವರು ಸುಳ್ಯದಲ್ಲಿ ನಡೆದ ಸಂಬಂಧಿಕರ ಮದುವೆ ಕಾರ್ಯಕ್ರಮ ಮುಗಿಸಿ ಪತ್ನಿ ಜತೆಗೆ ಮನೆಗೆ ತೆರಳುತ್ತಿದ್ದಾಗ ಸುಳ್ಯ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಬಾಬು ನಾಯರ್  ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‍ನ ಹಿಂಬದಿ ಕುಳಿತಿದ್ದ ಅವರ ಪತ್ನಿ ಶೈಜಾ ಗಾಯಗೊಂಡಿದ್ದು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಕೇಸು ದಾಖಲಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News