ನ.16:ರಂದು ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್

Update: 2019-11-13 14:55 GMT

ಮಂಗಳೂರು, ನ.13: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣಾ ಸ್ಪರ್ಧೆ ಹಾಗೂ ವಿಜ್ಞಾನ ಮಾದರಿಗಳ ಪ್ರದರ್ಶನ ‘ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್’ ಕಾರ್ಯಕ್ರಮವು ನ.16ರಂದು ಕಾಲೇಜಿನ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಹ ಸಂಯೋಜಕ ಜಾನ್ಸನ್ ಟೆಲ್ಲಿಸ್ ತಿಳಿಸಿದ್ದಾರೆ.

ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‌ಎಸ್‌ಟಿಎಚ್, ಸ್ಟಾರ್ಟ್‌ಅಪ್ ಇಂಡಿಯಾ ಮಿಷನ್‌ಗೆ ಅನುಗುಣವಾಗಿ ವಿಜ್ಞಾನದ ಕಡೆಗೆ ಯುವ ವಿದ್ಯಾರ್ಥಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್ ಪಿಯುಸಿ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮ ಆಯೋಜಿಸಿದೆ ಎಂದರು.

ಸಮುದಾಯ ಆಧರಿತ ವಿವಿಧ ಸಮಸ್ಯೆಗಳ ಮತ್ತು ವಿನ್ಯಾಸ ಚಿಂತನೆಯ ಕುರಿತು 200 ಶಾಲೆಗಳಲ್ಲಿ 10 ಸಾವಿರ ವಿದ್ಯಾರ್ಥಿಗಳಿಗೆ ಕಾರ್ಯಾಗಾರಗಳನ್ನು ಒಳಗೊಂಡು 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ 400ಕ್ಕೂ ಹೆಚ್ಚು ವಿಜ್ಞಾನದ ಮಾದರಿಗಳ ಪ್ರದರ್ಶನವಿರಲಿದೆ. ಅದರಲ್ಲಿ 40 ಉತ್ಪನ್ನಗಳನ್ನು ಸ್ಟಾರ್ಟ್‌ಅಪ್‌ಗಳಾಗಿ ಪರಿವರ್ತಿಸುವ ಉದ್ದೇಶದಿಂದ ಆಯ್ಕೆ ಮಾಡಲಾಗುವುದು ಎಂದು ಜಾನ್ಸನ್ ಟೆಲ್ಲಿಸ್ ತಿಳಿಸಿದರು.

ನ.14 ಮತ್ತು 15ರಂದು ‘ಬಿ ವಿದ್ ಇಂಜಿನಿಯರಿಂಗ್’ ಕಾರ್ಯಕ್ರಮವಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಹೊಂದಿರುವ ಸಮಾನ ಮನಸ್ಕ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇಂಜಿನಿಯರಿಂಗ್‌ನ ನಿಜವಾದ ಮನೋಭಾವ ಏನು ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಒಳ ನೋಟವನ್ನು ನೀಡುವುದು ಇದರ ಉದ್ದೇಶವಾಗಿದೆ ಎಂದು ಜಾನ್ಸನ್ ಟೆಲ್ಲಿಸ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಅಶ್ವಿನ್ ಶೆಟ್ಟಿ, ಸಾಗರ್ ದೇವಾಡಿಗ, ಹಿತೈಷಿ, ಗಗನ್‌ದೀಪ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News