×
Ad

ಉಡುಪಿ: ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್-2019 ಉದ್ಘಾಟನೆ

Update: 2019-11-13 21:34 IST

ಉಡುಪಿ, ನ.13: ಮಕ್ಕಳ ಹಕ್ಕು ಅದರ ಬಳಕೆ ಕುರಿತು ತಿಳಿದುಕೊಳ್ಳುವುದು ಪ್ರತಿಯೊಬ್ಬ ಪೋಷಕರು ಹಾಗೂ ಮಕ್ಕಳ ಕರ್ತವ್ಯವಾಗಿದೆ ಎಂದು ಉಡುಪಿ ಜಿಪಂನ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಬೆಂಗಳೂರು, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ, ಪಡಿ ಸಂಸ್ಥೆ ಮಂಗಳೂರು, ಜಿಪಂ ಉಡುಪಿ, ಜಿಲ್ಲಾ ಎಸ್‌ಡಿಎಂಸಿ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ ಸಂತೆಕಟ್ಟೆ, ಲಿಯೋ ಕ್ಲಬ್ ಉಡುಪಿ, ಸ್ವಚ್ಛ ಭಾರತ್ ಫ್ರೆಂಡ್ಸ್ ಉಡುಪಿ, ಜೆಸಿಐ ಉಡುಪಿ ಸಿಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್-2019 ಕಾರ್ಯಕ್ರಮವನ್ನು ಉದ್ಘಾಟಿಸಿ ವಾತನಾಡುತಿದ್ದರು.

ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಹೆತ್ತವರು, ಶಿಕ್ಷಕರ ಪಾತ್ರ ಅತಿಮುಖ್ಯ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು. ಮಕ್ಕಳ ಹಕ್ಕುಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಮಕ್ಕಳ ಹಕ್ಕುಗಳ ಸಂಸತ್ ಸಹಕಾರಿಯಾಗಿದ್ದು, ಮಕ್ಕಳು ಇದರ ಪ್ರಯೋಜನ ಪಡೆದು ಕೊಂಡು ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಲು ಉತ್ತಮ ವೇದಿಕೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ದಿವಾಕರ ಕುಮಾರ, ಉದ್ಯಮಿ ಅಮೃತ್ ಶೆಣೈ, ಉಡುಪಿ ಜಿಲ್ಲೆ 317ಸಿ ಲಿಯೋ ಕ್ಲಬ್‌ನ ಅಧ್ಯಕ್ಷ ಫೌಝಾನ್ ಅಕ್ರಂ, ಲಯನ್ಸ್‌ನ ಜಿಲ್ಲಾ ಸಂಯೋಜಕ ಮಹಮ್ಮದ್ ಮೌಲಾನ, ಲಯನ್ಸ್ ಕ್ಲಬ್ ಸಂತೆಕಟ್ಟೆ ಅಧ್ಯಕ್ಷ ರಾಜೇಶ್, ಸ್ವಚ್ಛ ಭಾರತ್ ಫ್ರೆಂಡ್ಸ್ ಸ್ಥಾಪಕ ಗಣೇಶ್ ಪ್ರಸಾದ್ ಜಿ ನಾಯಕ್, ಜೆಸಿಐ ಉಡುಪಿ ಸಿಟಿ ಅಧ್ಯಕ್ಷ ಜಗದೀಶ್ ಶೆಟ್ಟಿ, ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷ ತಿಲೋತ್ತಮ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಡುಪಿ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯ ವಾಸು ಆಚಾರ್ ಸ್ವಾಗತಿಸಿದರು. ಸಲಹೆಗಾರ ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News