ನ.17-23: ಯಕ್ಷಾಂಗಣದಿಂದ ತಾಳಮದ್ದಳೆ ಸಪ್ತಾಹ

Update: 2019-11-13 16:20 GMT

ಮಂಗಳೂರು, ನ.13: ಯಕ್ಷಾಂಗಣ ಮಂಗಳೂರು, ಕರ್ನಾಟಕ ಯಕ್ಷಭಾರತಿ ಪುತ್ತೂರು ವತಿಯಿಂದ ಕನ್ನಡ ರಾಜ್ಯೋತ್ಸವ ಕಲಾಸಂಭ್ರಮವಾಗಿ ನಡೆಸುವ ಏಳನೇ ವರ್ಷದ ಕನ್ನಡ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ-2019’ ನ.17ರಿಂದ 23ರವರೆಗೆ ಹಂಪನಕಟ್ಟೆ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದೆ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.

ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ.17ರಂದು ಸಂಜೆ 4ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮ ಉದ್ಘಾಟಿಸುವರು. ಯಕ್ಷಾಂಗಣದ ಗೌರವಾಧ್ಯಕ್ಷ ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸುವರು. ಈ ಸಂದರ್ಭ ‘ಕೃಷ್ಣಾಭಿವಂದನಂ’ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್‌ಗೆ 2019-20ನೇ ಸಾಲಿನ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ ನ.23ರಂದು ನಡೆಯಲಿದೆ. ಈ ಸಂದರ್ಭ ಹಿರಿಯ ಯಕ್ಷಗಾನ ಸೀ ವೇಷಧಾರಿ ಡಾ.ಕೋಳ್ಯೂರು ರಾಮಚಂದ್ರ ರಾವ್‌ಗೆ ಯಕ್ಷಾಂಗಣ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪಂಚ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡುವರು. ಸಪ್ತಾಹದ ಏಳು ದಿನಗಳಲ್ಲಿ ‘ಸಂಧಾನಸಪ್ತಕ’ ಸರಣಿ ತಾಳಮದ್ದಳೆ ಏರ್ಪಡಿಸಲಾಗಿದೆ. ಪ್ರತಿದಿನ ಸಂಜೆ 4:30ರಿಂದ ತಾಳಮದ್ದಳೆ ಆರಂಭವಾಗಲಿದೆ ಎಂದು ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ತೋನ್ಸೆ ಪುಷ್ಕಳ ಕುಮಾರ್, ಅಶೋಕ ಮಾಡ ಕುದ್ರಾಡಿ, ಬೆಟ್ಟಂಪಾಡಿ ಸುಂದರ ಶೆಟ್ಟಿ, ಸುಮಾ ಪ್ರಸಾದ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News