ಹಜ್‌ ಯಾತ್ರೆ-2020: ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಡಿ.5ರವರೆಗೆ ಕಾಲಾವಕಾಶ

Update: 2019-11-13 17:22 GMT

ಬೆಂಗಳೂರು, ನ.13: 2020ನೇ ಸಾಲಿನ ಪವಿತ್ರ ಹಜ್‌ ಯಾತ್ರೆಗೆ ತೆರಳಲು ಬಯಸುವ ಆಕಾಂಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನ.10ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ದೇಶದ ಹಲವು ರಾಜ್ಯಗಳ ಹಜ್ ಸಮಿತಿಯ ಮನವಿಯ ಹಿನ್ನೆಲೆಯಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಡಿಸೆಂಬರ್ 5ರವರೆಗೆ ವಿಸ್ತರಿಸಲಾಗಿದೆ ಎಂದು ಭಾರತೀಯ ಹಜ್ ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಖ್ಸೂದ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಆನ್‌ಲೈನ್ ಮೂಲಕ ಹಜ್‌ ಯಾತ್ರೆಗೆ ಅರ್ಜಿ ಸಲ್ಲಿಸುವವರು ಪ್ರಸಕ್ತ ಸಾಲಿನ ಡಿಸೆಂಬರ್ 5ಕ್ಕಿಂತ ಮುಂಚಿತವಾಗಿ ವಿತರಿಸಿರುವ ಹಾಗೂ 2021ರ ಜನವರಿ 20ರವರೆಗೆ ಮಾನ್ಯತೆಯನ್ನು ಹೊಂದಿರುವ ಭಾರತದ ಅಂತರ್‌ರಾಷ್ಟ್ರೀಯ ಪಾಸ್‌ಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News