ಲಾರಿ ಢಿಕ್ಕಿ: ವಿದ್ಯಾರ್ಥಿನಿ ಮೃತ್ಯು

Update: 2019-11-13 17:38 GMT

ಬೆಂಗಳೂರು, ನ.13: ಶರವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಇಲ್ಲಿನ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ರೇವಾ ಕಾಲೇಜಿನಲ್ಲಿ 3ನೆ ವರ್ಷದ ಬಿಟೆಕ್ ಪದವಿ ವ್ಯಾಸಂಗ ಮಾಡುತ್ತಿದ್ದ ತನಿಶಾ ಎಂಬಾಕೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ.

ಕಾಲೇಜಿನಿಂದ ತನಿಶಾ ಸಹಪಾಠಿಯಾಗಿದ್ದ ಶ್ರೇಯಾ ಜೊತೆ ಬಾಡಿಗೆ ಪಡೆದ ಸ್ಕೂಟರ್‌ನಲ್ಲಿ ಚಿಕ್ಕಜಾಲ ಮುಖ್ಯ ರಸ್ತೆಯ ಮಾರ್ಗವಾಗಿ ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಓಡಿಸುತ್ತಿದ್ದ ತನಿಶಾ ಮೃತಪಟ್ಟರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಸ್ಕೂಟರ್ ಹಿಂಬದಿ ಕುಳಿತಿದ್ದ ಶ್ರೇಯಾ ಸಹ ಗಾಯಗೊಂಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿರುವ ಚಿಕ್ಕಜಾಲ ಸಂಚಾರ ಪೊಲೀಸರು ಲಾರಿ ಚಾಲಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News