ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ ಆರೋಪ: ಟೈಲರ್ ಬಂಧನ

Update: 2019-11-13 18:27 GMT

ಬೆಂಗಳೂರು, ನ.13: ಬಟ್ಟೆ ಅಳತೆ ತೆಗೆದುಕೊಳ್ಳುವ ವೇಳೆ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಟೈಲರ್‌ನನ್ನು ಇಲ್ಲಿನ ಮಡಿವಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಜೈಭೀಮ್ ನಗರದ ನಿವಾಸಿ ರಝಾಕ್ ಬಂಧಿತ ಟೈಲರ್ ಎಂದು ತಿಳಿದುಬಂದಿದೆ.

ಮಡಿವಾಳದಲ್ಲಿ ಟೈಲರ್ ಅಂಗಡಿ ನಡೆಸುತ್ತಿದ್ದ ಆರೋಪಿಯು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಒಡಿಶಾ ಮೂಲದ ವಿದ್ಯಾರ್ಥಿನಿ ಬಟ್ಟೆಯನ್ನು ಹೊಲಿಸಿ ಕೊಳ್ಳಲು ಬಂದಾಗ ಅಳತೆ ತೆಗೆದುಕೊಳ್ಳುವ ನೆಪದಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ವಿದ್ಯಾರ್ಥಿನಿ ನೀಡಿರುವ ದೂರಿನನ್ವಯ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News