ಮಂಗಳೂರು ಮನಪಾ ಚುನಾವಣೆಯ ಮತ ಎಣಿಕೆ ಆರಂಭ

Update: 2019-11-14 03:14 GMT

ಮಂಗಳೂರು, ನ.14: ಮಂಗಳೂರು ಮಹಾನಗರ ಪಾಲಿಕೆಗೆ ನ.12ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಗರದ ರೊಸಾರಿಯೊ ಶಿಕ್ಷಣ ಸಂಸ್ಥೆಯಲ್ಲಿ ಆರಂಭಗೊಂಡಿದೆ.

ಬಿಜೆಪಿ ಆರಂಭದಲ್ಲೇ ಖಾತೆ ತೆರೆದಿದೆ. ಸುರತ್ಕಲ್ ಪಶ್ಚಿಮ 1ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಶೋಭಾ ರಾಜೇಶ್ ವಿಜಯಿಯಾಗಿದ್ದಾರೆ. ಶೋಭಾ ರಾಜೇಶ್ 985 ಮತಗಳನ್ನು ಗಳಿಸಿದರೆ, ಅವರ ನಿಕಟ ಪ್ರತಿಸ್ಪರ್ಧಿ ರೇವತಿ ಪುತ್ರನ್ 760 ಮತ, ಶಾಂತಾ ರಾವ್ 548 ಮತಗಳನ್ನು ಪಡೆದಿದ್ದಾರೆ. 21 ನೋಟಾ ಚಲಾವಣೆಯಾಗಿದೆ.

ಸೆಂಟ್ರಲ್ ಮಾರ್ಕೆಟ್ ವಾರ್ಡ್ 41ರಲ್ಲಿ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಗೆಲುವು ಸಾಧಿಸಿದ್ದಾರೆ. ಪೂರ್ಣಿಮಾ 2037 ಮತಗಳನ್ನು ಗಳಿಸಿದರೆ, ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಮಮತಾ ಶೆಣೈ 426 ಮತಗಳನ್ನಷ್ಟೇ ಗಳಿಸಲು ಶಕ್ತರಾಗಿದ್ದಾರೆ. 18 ನೋಟಾ ಚಲಾವಣೆಯಾಗಿದೆ.

 60 ವಾರ್ಡ್‌ಗಳಿಗೆ ಸ್ಪರ್ಧಿಸಿರುವ 180 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮಧ್ಯಾಹ್ನದೊಳಗೆ ಹೊರಬೀಳಲಿದೆ.
 ತಲಾ 5 ವಾರ್ಡ್‍ಗೆ ಒಬ್ಬರಂತೆ  ಒಟ್ಟು 12 ಚುನಾವಣಾಧಿಕಾರಿಗಳು 12 ಕೊಠಡಿಗಳಲ್ಲಿ ಮತ ಎಣಿಕೆ ನಡೆಸುತ್ತಿದ್ದಾರೆ. ಆಯಾ ಚುನಾವಣಾಧಿಕಾರಿಗಳು ಪ್ರತಿಯೊಂದು ವಾರ್ಡ್ ಮತ ಎಣಿಕೆ ಪೂರ್ಣಗೊಂಡ ನಂತರ ಇನ್ನೊಂದು ವಾರ್ಡ್‍ನ ಮತ ಎಣಿಕೆ ಕೈಗೊಳ್ಳಲಿದ್ದಾರೆ. ಒಂದು ಸುತ್ತಿನಲ್ಲಿ 4 ಮತಗಟ್ಟೆಗಳ ಮತ ಎಣಿಕೆ ನಡೆಯಲಿದೆ. 

ಎಣಿಕೆ ಕೇಂದ್ರದ ಸುತ್ತ ಬೆಳಗ್ಗೆಯೇ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಮತ ಎಣಿಕೆ ಕೇಂದ್ರ ಸುತ್ತಮುತ್ತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News