16 ಅನರ್ಹ ಶಾಸಕರು ಬಿಜೆಪಿ ತೆಕ್ಕೆಗೆ

Update: 2019-11-14 14:52 GMT

ಬೆಂಗಳೂರು, ನ.14: ಕಾಂಗ್ರೆಸ್- ಜೆಡಿಎಸ್ ನ ಹದಿನಾರು ಅನರ್ಹ ಶಾಸಕರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕರ್ನಾಟಕದ ಅನರ್ಹ ಶಾಸಕರಾದ ಮಹೇಶ್ ಕುಮಟಹಳ್ಳಿ, ರಮೇಶ್ ಜಾರಕಿಹೊಳಿ, ಹೆಚ್.ವಿಶ್ವನಾಥ್, ಶಂಕರ್, ಆನಂದ್ ಸಿಂಗ್, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಹೆಬ್ಬಾರ್, ನಾರಾಯಣ ಗೌಡ, ಎಚ್.ಟಿ.ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜು, ಮುನಿರತ್ನ, ಎಂಟಿವಿ ನಾಗರಾಜ್,ಡಾ.ಸುಧಾಕರ್, ಶ್ರೀಮಂತ್ ಪಾಟೀಲ್, ಬಿ.ಸಿ. ಪಾಟೀಲ್ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಸರಿ ಶಾಲು ಹೊದ್ದು, ಬಿಜೆಪಿ ಬಾವುಟ ಹಿಡಿಯುವ ಮೂಲಕ ಬಿಜೆಪಿಗೆ ಸೇರ್ಪಡೆಗೊಂಡರು.

ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅನರ್ಹ ಶಾಸಕರನ್ನು ಬಿಜೆಪಿಗೆ ಸ್ವಾಗತಿಸಿದರು.

ಹದಿನೇಳು ಅನರ್ಹ ಶಾಸಕರ ಪೈಕಿ ರೋಷನ್ ಬೇಗ್ ಗೆ ಬಿಜೆಪಿಗೆ ಸೇರ್ಪಡೆಯಾಗಲು ಸಾಧ್ಯವಾಗಿಲ್ಲ. ಐಎಂಎ ಪ್ರಕರಣದಲ್ಲಿ ಆರೋಪಿಯಾಗಿರುವ ರೋಷನ್ ಬೇಗ್ ಸೇರ್ಪಡೆಗೆ ಸಂಬಂಧಿಸಿ ಬಿಜೆಪಿಯಲ್ಲಿ ವಿರೋಧ ವ್ಯಕ್ತವಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News