ಮಂಗಳೂರು ಮನಪಾ ಚುನಾವಣೆ: ಬಿಜೆಪಿ ಜಯಭೇರಿ

Update: 2019-11-14 08:03 GMT

ಮಂಗಳೂರು, ನ.14: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ ಅಧಿಕಾರದ ಗದ್ದುಗೆಗೆ ಏರುವುದು ಖಚಿತಗೊಂಡಿದೆ.

ಒಟ್ಟು 60 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್‌ಡಿಪಿಐ 2 ವಾರ್ಡ್‌ಗಳಲ್ಲಿ ಜಯ ಸಾಧಿಸಿದೆ. ಆ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ. ಮನಪಾ ಚುನಾವಣೆಯು ನ.12ರಂದು ಚುನಾವಣೆ ನಡೆದಿತ್ತು. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಂಡಿತ್ತು. ಎಣಿಕೆ ಆರಂಭಗೊಂಡ ಸ್ವಲ್ಪ ಹೊತ್ತಲ್ಲೇ ಫಲಿತಾಂಶ ಹೊರಬಿದ್ದಿದ್ದು, ಆರಂಭದಲ್ಲೇ ಬಿಜೆಪಿ ಗೆಲುವು ಸಾಧಿಸಿತ್ತು. ಈ ಗೆಲುವನ್ನು ಕೊನೆಯವರೆಗೂ ಉಳಿಸಿಕೊಂಡ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆಯೇರುವಲ್ಲಿ ಸಫಲವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News