ನಂದಿಬೆಟ್ಟದಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು

Update: 2019-11-14 14:01 GMT

ಬೆಂಗಳೂರು, ನ.14: ಪ್ರವಾಸಕ್ಕೆಂದು ನಂದಿಬೆಟ್ಟಕ್ಕೆ ಬಂದಿದ್ದ ವಿದ್ಯಾರ್ಥಿನಿ, ಆಕಸ್ಮಿಕವಾಗಿ ಕೆಳಗೆ ಬಿದ್ದು, ಮೃತಪಟ್ಟಿರುವ ಘಟನೆ ಇಲ್ಲಿನ ನಂದಿ ಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಚಿಕ್ಕಬಾಣವಾರ ನಿವಾಸಿ ನಯನಾ(19) ಮೃತ ವಿದ್ಯಾರ್ಥಿನಿ ಎಂದು ಪೊಲೀಸರು ಗುರುತಿಸಿದ್ದಾರೆ.

ಹೆಸರಘಟ್ಟದ ಆಚಾರ್ಯ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ನಯನಾ, ಸಹಪಾಠಿಗಳ ಜೊತೆ ನಂದಿ ಬೆಟ್ಟಕ್ಕೆ ಬುಧವಾರ ತೆರಳಿದ್ದಳು. ವಿದ್ಯಾರ್ಥಿಗಳು ನಂದಿಬೆಟ್ಟದಲ್ಲಿ ಸುತ್ತು ಹಾಕುವಾಗ ನಯನಾ ಕಾಲುಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ ಎನ್ನಲಾಗಿದೆ.

ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಸಾವನ್ನಪ್ಪಿದ್ಧಾಳೆ ಎನ್ನಲಾಗಿದೆ. ಈ ಸಂಬಂಧ ನಂದಿ ಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News