ನೆಹರೂ ಆಧುನಿಕ ಭಾರತ ನಿರ್ಮಾಣಕ್ಕೆ ಒತ್ತು ಕೊಟ್ಟವರು: ಸಿಎಂ ಯಡಿಯೂರಪ್ಪ

Update: 2019-11-14 14:06 GMT

ಬೆಂಗಳೂರು, ನ. 14: ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂರವರು ಭಾರತದ ಸ್ವಾತಂತ್ರ ಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರ ಜತೆ ಹೋರಾಟ ನಡೆಸಿದವರಲ್ಲಿ ಮುಂಚೂಣಿ ನಾಯಕರು. ಅಲ್ಲದೆ, ಆಧುನಿಕ ಭಾರತ ನಿರ್ಮಾಣಕ್ಕೆ ಒತ್ತು ಕೊಟ್ಟವರು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸ್ಮರಿಸಿದರು.

ಗುರುವಾರ ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಅವರ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ನೆಹರೂ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನೆಹರೂ ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ, ಯೋಜನಾ ಆಯೋಗ ಸ್ಥಾಪನೆ, ಪಂಚವಾರ್ಷಿಕ ಯೋಜನೆ ಜಾರಿಗೆ ತಂದವರು ಎಂದರು.

ನೆಹರೂರವರ ಜನ್ಮದಿನದಂದು ಅವರ ಗೌರವಪೂರ್ವಕವಾಗಿ ಸ್ಮರಿಸಿದ್ದೇನೆ. ಅವರ ಸೇವೆಯನ್ನು ಎಲ್ಲರು ನೆನಪು ಮಾಡಿಕೊಳ್ಳಬೇಕು. ನೆಹರೂ ಅವರ ತತ್ವ-ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಮುರುಗೇಶ್ ಆರ್.ನಿರಾಣಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಅನರ್ಹ ಶಾಸಕ ಆರ್.ರೋಷನ್ ಬೇಗ್ ಅವರು ಬಿಜೆಪಿ ಸೇರ್ಪಡೆ ಸಂಬಂಧ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅವರಿಗೆ ಟಿಕೆಟ್ ನೀಡುವ ಬಗ್ಗೆ ತೀರ್ಮಾನ ಆಗಬೇಕಿದೆ

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News