ಕಾರ್ಕಳ: ನ.18ರಂದು ದೇವರಾಜ ಅರಸು ಭವನ, ಇತರ ಕಾಮಗಾರಿ ಉದ್ಘಾಟನೆ

Update: 2019-11-14 15:09 GMT

ಕಾರ್ಕಳ: ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ರೂ. 107.90 ಲಕ್ಷ ವೆಚ್ಚದಲ್ಲಿ ಕಾರ್ಕಳದಲ್ಲಿ ನಿರ್ಮಾಣಗೊಂಡ ದೇವರಾಜ ಅರಸು ಭವನ ನ.18ರಂದು  ಉದ್ಘಾಟನೆ ನಡೆಯಲಿದೆ.

ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಕಾರ್ಕಳ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ  ಕಾರ್ಕಳದಲ್ಲಿ ಹಾಲಿ ಇರುವ ಪ್ರವಾಸಿ ಮಂದಿರದ ಆವರಣದಲ್ಲಿ ಗಣ್ಯ ವ್ಯಕ್ತಿಗಳ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಯ ಉದ್ಘಾಟನೆ, ವಿಕಾಸ ವಿವಿದ್ಧೋದ್ದೇಶ ಸೌಹಾರ್ದ ಸಹಕಾರಿ (ನಿ) ಕಾರ್ಕಳ, ಶುಭಂ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ ವಿಕಾಸ ಸ್ತ್ರೀಧನ್ ಉದ್ಘಾಟನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರೂ 1.64 ಕೋಟಿ ಅಂದಾಜು ವೆಚ್ಚದಲ್ಲಿ ಕಾರ್ಕಳ ತಾಲೂಕು ಕ್ರಿಡಾಂಗಣದಲ್ಲಿ ನಿರ್ಮಿಸಲಾದ ಈಜುಕೊಳ ಇವುಗಳ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ನ. 18ರ ಮಧ್ಯಾಹ್ನ ಹಂತ, ಹಂತವಾಗಿ ಉದ್ಘಾಟಿಸಲಿದ್ದಾರೆ ಎಂದು ಶಾಸಕ ಹಾಗೂ ಕರ್ನಾಟಕ ಸರಕಾರ ಮುಖ್ಯ ಸಚೇತಕ ವಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ.

ವಿಕಾಸ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸ್ವರ್ಣ ಕಾರ್ಕಳ, ಸುಂದರ ಕಾರ್ಕಳ ಘೋಷವಾಕ್ಯದೊಂದಿಗೆ ಇನ್ನಷ್ಟು ಯೋಜನೆಗಳು ಕಾರ್ಕಳದಲ್ಲಿ ಅನುಷ್ಠಾನಗೊಳ್ಳಲಿದೆ ಎಂದರು.

ಶಾಸಕ ಹಾಗೂ ಸರ್ಕಾರಿ ಮುಖ್ಯ ಸಚೇತಕ ವಿ.ಸುನೀಲ್‍ಕುಮಾರ್ ಅಧ್ಯಕ್ಷತೆಯಲ್ಲಿ ಜರಗಲಿರುವ ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ದಿನಕರ ಭಾಬು, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಸುಕುಮಾರ ಶೆಟ್ಟಿ, ರಾಜ್ಯಸಭಾ ಸದಸ್ಯ ಓಸ್ಕರ್ ಫೆರ್ನಾಂಡಿಸ್, ಸಂಸದರಾದ ಶೋಭಾ ಕರಂದ್ಲಾಜೆ, ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ , ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಪಾರ ಮುಖ್ಯಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಕಾರ್ಯದರ್ಶಿ ಗುರುಪ್ರಸಾದ್, ಮುಖ್ಯ ಇಂಜಿನಿಯರ್ ಹೆಚ್.ಸಿ. ರಮೇಂದ್ರ, ಸಹಕಾರಿ ಭಾರತಿ ಜಿಲ್ಲಾಧ್ಯಕ್ಷ ಸದಾಶಿವ ಶೆಟ್ಟಿ, ಶುಭಂ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಶಿವಮೊಗ್ಗ ಇದರ ಅಧ್ಯಕ್ಷ ಶ್ರೀಧರ್ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.  

ಅಂತರ್ ಜಿಲ್ಲಾ ಮಟ್ಟದ ಈಜು ಸ್ಪರ್ಧೆ 

ನ. 19 ರಂದು ಪೂರ್ವಾಹ್ನ ಗಂಟೆ 9 ಕ್ಕೆ ಶಾಸಕ ಸುನಿಲ್ ಕುಮಾರ್ ಇವರು 7 ವಿಭಾಗಗಳಲ್ಲಿ ನಡೆಯಲಿರುವ ಈಜು ಸ್ಪರ್ಧೆಗಳಿಗೆ ಚಾಲನೆ ನೀಡಲಿದ್ದಾರೆ. 15 ರಿಂದ 17 ವರ್ಷದೊಳಗಿನ ಬಾಲಕ ಬಾಲಕಿಯರಿಗೆ, 13 ರಿಂದ 14 ವರ್ಷದೊಳಗಿನ ಬಾಲಕ ಬಾಲಕಿಯರಿಗೆ, 11 ರಿಂದ 12 ವರ್ಷದೊಳಗಿನ ಬಾಲಕ ಬಾಲಕಿಯರಿಗೆ, 9 ರಿಂದ 10 ವರ್ಷದೊಳಗಿನ ಬಾಲಕ ಬಾಲಕಿಯರಿಗೆ, 8 ವರ್ಷದ ಬಾಲಕ ಬಾಲಕಿಯರಿಗೆ, 7 ವರ್ಷದೊಳಗಿನ ಬಾಲಕ ಬಾಲಕಿಯರಿಗೆ, 17 ವರ್ಷಕ್ಕೂ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ವಿಜೇತರಿಗೆ ಪದಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಹಾಗೂ ಎಲ್ಲಾ ಸ್ಪರ್ಧಾಳುಗಳಿಗೆ ಉಚಿತ ಊಟೋಪಹಾರ ವ್ಯವಸ್ಥೆ ಮಾಡಲಾಗುವುದು. ಆಸಕ್ತ ಈಜು ಸ್ಪರ್ಧಿಗಳು ನ. 16 ರೊಳಗಾಗಿ youthserviceudupi@gmail.com ಈ ಮೇಲ್ ವಿಳಾಸಕ್ಕೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News