ಪೊಲೀಸ್ ಹುದ್ದೆಗಳಿಗೆ ನ.17ಕ್ಕೆ ಲಿಖಿತ ಪರೀಕ್ಷೆ

Update: 2019-11-14 16:31 GMT

ಉಡುಪಿ, ನ.14: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ಹಾಗೂ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಇದೇ ನ.17ರಂದು ರವಿವಾರ ಜಿಲ್ಲೆಯ ವಿವಿಧ 12 ಶಿಕ್ಷಣ ಸಂಸ್ಥೆಗಳಲ್ಲಿ ಲಿಖಿತ ಪರೀಕ್ಷೆಗಳು ನಡೆಯಲಿವೆ.

ಉಡುಪಿ ಜಿಲ್ಲೆಯಲ್ಲಿ ಪ್ರವೇಶ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ವಿವರ ಹೀಗಿದೆ. 1.ಪೂರ್ಣಪ್ರಜ್ಞ ಕಾಲೇಜು ಉಡುಪಿ, 2.ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ, 3.ಮಹಾತ್ಮ ಗಾಂಧಿ ಸ್ಮಾರಕ ಪ.ಪೂ.ಕಾಲೇಜು ಉಡುಪಿ, 4.ವಿದ್ಯೋದಯ ಪಬ್ಲಿಕ್ ಸ್ಕೂಲ್ ವಾದಿರಾಜ ರಸ್ತೆ ಉಡುಪಿ, 5. ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ, 6.ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಸ್ಕೂಲ್ ಕನ್ನರ್‌ಪಾಡಿ ಕಿನ್ನಿಮೂಲ್ಕಿ ಉಡುಪಿ.

7.ಮಹಿಳಾ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, 8.ವಿದ್ಯೋದಯ ಪದವಿ ಪೂರ್ವ ಕಾಲೇಜು ವಾದಿರಾಜ ರಸ್ತೆ ಉಡುಪಿ, 9. ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, 10. ಮಿಲಾಗ್ರಿಸ್ ಪ.ಪೂ. ಕಾಲೇಜು ಕಲ್ಯಾಣಪುರ ಉಡುಪಿ, 11. ವೌಂಟ್ ರೋಸರಿ ಆಂಗ್ಲ ಮಾದ್ಯಮ ಶಾಲೆ ಕಲ್ಯಾಣಪುರ ಸಂತೆಕಟ್ಟೆ ಉಡುಪಿ, 12. ಮಣಿಪಾಲ ಪ.ಪೂ.ಕಾಲೇಜು ಮಣಿಪಾಲ.

ಜಿಲ್ಲೆಯ ಈ 12 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಿಗದಿತ ಗುರುತಿನ ಚೀಟಿಯೊಂದಿಗೆ ಪರೀಕ್ಷೆಗೆ ಹಾಜರಾಗಬೇಕು. ಲಿಖಿತ ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಕ್ಕಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್- www.ksp.gov.in - ನ್ನು ಪರಿಶೀಲಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News