‘ದೇಶಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ನೆಹರು’

Update: 2019-11-14 16:46 GMT

ಉಡುಪಿ, ನ.14: ಆಧುನಿಕ ಭಾರತದ ಶಿಲ್ಪಿ, ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 130ನೇ ಹುಟ್ಟುಹಬ್ಬವನ್ನು ಉಡುಪಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, 17 ವರ್ಷಗಳ ಸುದೀರ್ಘ ಅವಧಿಗೆ ದೇಶದ ನೇತೃತ್ವವನ್ನು ವಹಿಸಿ ದೇಶಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ನೆಹರೂ ಮಹಾತ್ಮಾ ಗಾಂಧಿ ಅವರ ಸ್ವಾತಂತ್ರ ಹೋರಾಟದ ನೇತೃತ್ವ ವಹಿಸುವ ಮೂಲಕ ದೇಶಕ್ಕೆ ಕೊಟ್ಟ ತ್ಯಾಗ, ಬಲಿದಾನ, ಶ್ರಮದಿಂದ ದೇಶ ಇಂದು ಪ್ರಜಾತಂತ್ರ ವ್ಯವಸ್ಥೆಯೊಂದಿಗೆ ಬಲಿಷ್ಠವಾಗಿದೆ ಎಂದರು.

ನೆಹರು ಅವರು ವಿಜ್ಞಾನಿಗಳು ಹಾಗೂ ಕೈಗಾರಿಕೋದ್ಯಮಿಗಳ ಸಹಬಾಗಿತ್ವ ದೊಂದಿಗೆ ದೇಶದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿ ಸಲು ಕಾರಣೀಭೂತರಾದರು. ಸಾರಿಗೆ ವ್ಯವಸ್ಥೆ, ಆರೋಗ್ಯ ಕೇಂದ್ರ ಮತ್ತು ಶಿಕ್ಷಣ ಕ್ರಾಂತಿ, ವಿಜ್ಞಾನ, ತಂತ್ರಜ್ಞಾನ ದೊಂದಿಗೆ ಪಂಚವಾರ್ಷಿಕ ಯೋಜನೆ ಜಾರಿಗೆ ತಂದು ರಾಷ್ಟ್ರವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದರು.

ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

ಸಭೆಯಲ್ಲಿ ಮಾಜಿ ಶಾಸಕ ಯು.ಆರ್.ಸಭಾಪತಿ, ಎಐಸಿಸಿ ಸದಸ್ಯ ಪಿ.ವಿ. ಮೋಹನ್, ಮಾಜಿ ಕೆಪಿಸಿಸಿ ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಪಕ್ಷದ ಮುಖಂಡರಾದ ಸರಳಾ ಕಾಂಚನ್, ದಿನೇಶ್ ಪುತ್ರನ್, ಭಾಸ್ಕರ್ ರಾವ್ ಕಿದಿಯೂರು, ನೀರೆಕೃಷ್ಣ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಜ್ಯೋತಿ ಹೆಬ್ಬಾರ್, ರಮೇಶ್ ಕಾಂಚನ್, ಸತೀಶ್ ಅಮೀನ್ ಪಡುಕೆರೆ, ಮೈರ್ಮಾಡಿ ಸುಧಾಕರ ಶೆಟ್ಟಿ, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ನಾಗೇಶ್ ಉದ್ಯಾವರ, ಮಹಾಬಲ ಕುಂದರ್,ಅಣ್ಣಯ್ಯ ಶೇರಿಗಾರ್, ಇಸ್ಮಾಯಿಲ್ ಆತ್ರಾಡಿ, ಮಂಜುನಾಥ ಪೂಜಾರಿ, ಯತೀಶ್ ಕರ್ಕೇರ, ಶಶಿಧರ ಶೆಟ್ಟಿ ಎಲ್ಲೂರು, ಮೀನಾಕ್ಷಿ ಮಾಧವ ಬನ್ನಂಜೆ, ಡಾ. ಸುನಿತಾ ಶೆಟ್ಟಿ, ಚಂದ್ರಿಕಾ ಶೆಟ್ಟಿ, ಪ್ರವೀಣ್‌ಕುಮಾರ್ ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಶೇಖರ ಮಡಿವಾಳ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News