ಕಾಪು: ಅಖಿಲ ಭಾರತ 66ನೇ ಸಹಕಾರಿ ಸಪ್ತಾಹಕ್ಕೆ ಚಾಲನೆ

Update: 2019-11-14 17:00 GMT

ಕಾಪು : ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ಪಡುಬಿದ್ರಿ, ಕಾಪು, ಇನ್ನಂಜೆ, ಬೆಳ್ಳೆ, ಬೆಳಪು, ಶಿರ್ವ, ಕಟಪಾಡಿ ಸಿ.ಎ. ಬ್ಯಾಂಕ್, ಉಡುಪಿ ಕೃಷಿ ಉತ್ಪನ್ನ ಸಹಕಾರಿ ಸಂಘಗಳ ಸಹಯೋಗದಲ್ಲಿ ನಡೆದ ಅಖಿಲ ಭಾರತ 66ನೇ ಸಹಕಾರಿ ಸಪ್ತಾಹಕ್ಕೆ ಚಾಲನೆ ನೀಡಲಾಯಿತು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಹಿರಿಯ ಸಹಕಾರಿ ಧುರೀಣರ ಚಳುವಳಿ ರೂಪದಿಂದ ಸಹಕಾರಿ ಯಶಸ್ಸು ಕಂಡಿದೆ. ಯಾವುದೇ ರಾಷ್ಟ್ರೀಕೃತ ಬ್ಯಾಂಕ್, ಆರ್ಥಿಕ ವ್ಯವಸ್ಥೆಗಳಿರಲಿ ನಮ್ಮ ರಾಜ್ಯ ಮತ್ತು ದೇಶದಲ್ಲಿ ಜನಸಾಮಾನ್ಯರ ನಾಡಿಮಿಡಿತವನ್ನು ಒಬ್ಬ ಆರ್ಥಿಕ ತಜ್ಞನ ನೆಲೆಯಲ್ಲಿ ನಿಂತು ತಿಳಿದುಕೊಳ್ಳುವ ಶಕ್ತಿ ಸಹಕಾರಿ ಕ್ಷೇತ್ರದಿಂದ ಎಂಬುದು ಸಾಭಿತಾಗಿದೆ. ತಮ್ಮ ಬೇಡಿಕೆಗಳನ್ನು ಎರಡು ದಿನಗಳೊಳಗೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತಿಳಿಸುವುದಾಗಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ  ಎಂ.ಎನ್. ರಾಜೇಂದ್ರ ಕುಮಾರ್‍ಸಹಕಾರಿ ಕ್ಷೇತ್ರದ ಆರ್ಥಿಕ ಪರಿಸ್ಥಿತಿ ಹಿನ್ನಡೆ ಕಾಣುವುದಿಲ್ಲ. ಆರ್‍ಬಿಐ, ಕೇಂದ್ರ ಸರ್ಕಾರ ಯಾವುದೇ ಕಾನೂನು ನಿಯಮ ತಂದರೂ ಹೋರಾಟ ಮಾಡಿ ಸಹಕಾರಿ ಕ್ಷೇತ್ರವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡಲಾಗುತ್ತದೆ. ವಾಣಿಜ್ಯ ಬ್ಯಾಂಕ್‍ಗಳು ಬಾಡಿಗೆ ಕಟ್ಟಡದಲ್ಲಿದೆ. ಭಾಷೆ ಬಾರದವರು ಅಲ್ಲಿ ಕೆಲಸ ನಿರ್ವಹಿಸುತ್ತಾರೆ. ಸಹಕಾರಿ ಬ್ಯಾಂಕ್‍ಗಳು ಸ್ವಂತ ಕಟ್ಟಡದಲ್ಲಿ ಕಾರ್ಯಚರಿಸುತ್ತವೆ. ವಾಣಿಜ್ಯ ಬ್ಯಾಂಕ್‍ಗಳಲ್ಲಿ ಠೇವಣಾತಿ ಇಟ್ಟಲ್ಲಿ ಅದು ದೊಡ್ಡ ಪಟ್ಟಣ ಪ್ರದೇಶದ ವ್ಯವಸ್ಥೆಗೆ ಹೋಗುತ್ತದೆ. ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ಠೇವಣಾತಿ ಇಟ್ಟಲ್ಲಿ ಅವರ ಕಾರ್ಯವ್ಯಾಪ್ತಿಯಲ್ಲಿ ಉಪಯೋಗ ಮಾಡುತ್ತಾರೆ ಹೊರತು ದೊಡ್ಡ ಪಟ್ಟಣಕ್ಕೆ ಉಪಯೋಗಿಸುತ್ತಿಲ್ಲ.

ಸಹಕಾರಿ ಸಪ್ತಾಹ ಉದ್ಘಾಟನೆಗೆ ಪೂರ್ವಭಾವಿಯಾಗಿ ಕಾಪು ವೀರಭದ್ರ ದೇವಸ್ಥಾನದಿಂದ ಜನಾರ್ದನ ದೇವಸ್ಥಾನದವರೆಗೆ ಮೆರವಣಿಗೆ ನಡೆಯಿತು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕ ಶಶಿಧರ್ ಎಲೆ ಅವರು ಗ್ರಾಮೀಣ ಸಹಕಾರ ಸಂಘಗಳ ಮೂಲಕ ಅನ್ವೇಷಣೆ ವಿಷಯದ ಕುರಿತು ದಿಕ್ಸೂಚಿ ಭಾಷಣ ಮಾಡಿದರು. ಸಪ್ತಾಹ ಸಂಘಟನಾ ಸಮಿತಿಯ ವತಿಯಿಂದ ಸಚಿವ ಕೋಟ ಶ್ರೀನಿವಾಸ ಪುಜಾರಿ ಮತ್ತು ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸಮ್ಮಾನಿಸಲಾಯಿತು.

ಶಾಸಕರಾದ  ಲಾಲಾಜಿ ಆರ್ ಮೆಂಡನ್, ಕೆ. ರಘುಪತಿ ಭಟ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೆ.ಎಂ.ಎಫ್ ಅಧ್ಯಕ್ಷ ರವಿರಾಜ ಹೆಗ್ಡೆ, ಸಹಕಾರ ಸಂಘಗಳ ಕುಂದಾಪುರ ವಿಭಾಗದ ಸಹಾಯಕ ಉಪನಿಬಂಧಕಿ ಚಂದ್ರಪ್ರತಿಮಾ ಎಮ್.ಜೆ., ಕರ್ನಾಟಕ ಹಾಲು ಒಕ್ಕೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್‍ನ ಅಧ್ಯಕ್ಷ ಯಶ್‍ಪಾಲ್ ಸುವರ್ಣ, ಉಡುಪಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನೀತಾ ಗುರುರಾಜ್,  ಇನ್ನಂಜೆ ಸಿಎ ಬ್ಯಾಂಕ್ ಅಧ್ಯಕ್ಷ ರಾಜೇಶ್ ರಾವ್ ಪಾಂಗಾಳ, ಬೆಳ್ಳೆ ಸಿಎ ಬ್ಯಾಂಕ್ ಅಧ್ಯಕ್ಷ ಶಿವಾಜಿ ಸುವರ್ಣ, ಶಿರ್ವ ಸಿಎ ಬ್ಯಾಂಕ್ ಅಧ್ಯಕ್ಷ ಕೋನ್ರಾರ್ಡ್ ಕ್ಯಾಸ್ತಲಿನೋ, ಕಟಪಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಮೈರ್ಮಾಡಿ, ಹರೀಶ್ ಕಿಣಿ, ಎಸ್‍ಸಿಡಿಸಿಸಿ ಬ್ಯಾಂಕ್‍ನ ನಿರ್ದೇಶಕರಾದ ಶಶಿ ಕುಮಾರ್ ರೈ, ಸದಾಶಿವ ಉಳ್ಳಾಲ್, ಅಶೋಕ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು. ಸಪ್ತಾಹದ ಸಂಚಾಲಕ, ಪಡುಬಿದ್ರಿ ಸಿ.ಎ. ಬ್ಯಾಂಕ್ ಅಧ್ಯಕ್ಷ ವೈ. ಸುಧೀರ್ ಕುಮಾರ್ ವಂದಿಸಿದರು. ವಾಲ್‍ಸ್ಟನ್ ಡೇಸಾ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News