ತಪ್ಪದೇ ಸಮವಸ್ತ್ರ ಧರಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಎದುರಿಸಿ: ಪೊಲೀಸರಿಗೆ ಆಯುಕ್ತರ ಸೂಚನೆ

Update: 2019-11-14 17:46 GMT

ಬೆಂಗಳೂರು, ನ.14: ಕರ್ತವ್ಯ ನಿರತ ಪೊಲೀಸರು ಕಡ್ಡಾಯ ಸಮವಸ್ತ್ರ ಧರಿಸಬೇಕು. ಇಲ್ಲದಿದ್ದರೆ, ಕಠಿಣ ಕಾನೂನು ಕ್ರಮ ಜರುಗಿಸಲಾಗುವುದೆಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ಸಮವಸ್ತ್ರ ಕುರಿತು ಆದೇಶ ಹೊರಡಿಸಿರುವ ಅವರು, ಈಗಾಗಲೇ ಕೆಲ ಸಿಬ್ಬಂದಿ ಸಮವಸ್ತ್ರ ಧರಿಸದೆ, ಇರುವುದು ಬೆಳಕಿಗೆ ಬಂದಿದೆ. ಹಾಗಾಗಿ, ಎಲ್ಲ ಪೊಲೀಸ್ ಠಾಣೆಗಳಲ್ಲಿನ ಸಿಬ್ಬಂದಿ ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು ಎಂದು ಸೂಚಿಸಿದ್ದಾರೆ.

ಸಂಚಾರಿ ಪೊಲೀಸರಿಗೂ ಈ ನಿಯಮ ಅನ್ವಯವಾಗಲಿದೆ ಎಂದಿರುವ ಆಯುಕ್ತರು, ತಪ್ಪು ಕಂಡುಬಂದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News