ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಪ್ರಶ್ನಿಸಿ ಅರ್ಜಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2019-11-14 17:49 GMT

ಬೆಂಗಳೂರು, ನ.14: 2017 ಹಾಗೂ 2018ನೆ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿರುವ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ನಿರ್ಮಾಪಕ ನರಸಿಂಹರಾಜು ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು.   

ಅರ್ಜಿದಾರರ ಪರ ವಾದಿಸಿದ ವಕೀಲ ಜಿ.ಆರ್.ಮೋಹನ್ ಅವರು, 2019ರಲ್ಲಿ ಸರ್ಟಿಫೈಡ್(ಪ್ರಮಾಣೀಕರಿಸಲಾದ) ಆದ ಚಲನಚಿತ್ರಗಳನ್ನು 2017 ಮತ್ತು 2018ನೆ ಸಾಲಿನ ಕರ್ನಾಟಕ ಚಲನಚಿತ್ರ ಪ್ರಶಸ್ತಿಗೆ ಹಾಗೂ ಪ್ರೋತ್ಸಾಹ ಧನಕ್ಕೆ ಪರಿಗಣಿಸಲಾಗಿದೆ. ಹೀಗಾಗಿ, 2017 ಮತ್ತು 2018ನೆ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನವನ್ನು ತಡೆ ಹಿಡಿಯಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರ, ಕೇಂದ್ರ ಚಲನಚಿತ್ರ ಪ್ರಾಮಾಣೀಕರಣ ಮಂಡಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News