250 ಟೆಸ್ಟ್ ವಿಕೆಟ್‌ಗಳನ್ನು ಪೂರೈಸಿದ ಆರ್.ಅಶ್ವಿನ್

Update: 2019-11-15 05:03 GMT

ಇಂದೋರ್, ನ.14: ಭಾರತದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸ್ವದೇಶದಲ್ಲಿ 250ನೇ ಟೆಸ್ಟ್ ವಿಕೆಟ್ ಪಡೆದರು. ಬಾಂಗ್ಲಾದೇಶದ ವಿರುದ್ಧ ಗುರುವಾರ ಇಲ್ಲಿ ಆರಂಭವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಈ ಸಾಧನೆ ಮಾಡಿದರು. ಅನಿಲ್ ಕುಂಬ್ಳೆ ಹಾಗೂ ಹರ್ಭಜನ್ ಸಿಂಗ್ ಬಳಿಕ ಸ್ವದೇಶದಲ್ಲಿ 250 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ ಭಾರತದ ಮೂರನೇ ಬೌಲರ್ ಅಶ್ವಿನ್. ಆರ್.ಅಶ್ವಿನ್ ಸ್ವದೇಶದಲ್ಲಿ 250ನೇ ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ. ಅನಿಲ್ ಕುಂಬ್ಳೆ ಹಾಗೂ ಹರ್ಭಜನ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಮೂರನೇ ಭಾರತೀಯ ಬೌಲರ್ ಆಗಿದ್ದಾರೆ ಎಂದು ಬಿಸಿಸಿಐ ಟ್ವಿಟರ್‌ನಲ್ಲಿ ಬರೆದಿದೆ. ಅಶ್ವಿನ್ ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನಾಡಲು ಮೈದಾನಕ್ಕೆ ಇಳಿಯುವ ಮೊದಲು 249 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದರು. ಬಾಂಗ್ಲಾ ನಾಯಕ ಮೊಮಿನುಲ್ ಹಕ್ ವಿಕೆಟ್ ಪಡೆದ ಅಶ್ವಿನ್ 250ನೇ ವಿಕೆಟ್ ಪೂರೈಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News