ಮೊದಲ ಟೆಸ್ಟ್: ಮಾಯಾಂಕ್ ಮೂರನೇ ಶತಕ

Update: 2019-11-15 07:28 GMT

ಇಂದೋರ್, ನ.15: ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಮಾಯಾಂಕ್ ಅಗರ್ವಾಲ್ ಮೂರನೇ ಟೆಸ್ಟ್ ಶತಕವನ್ನು ಸಿಡಿಸಿ ಮಿಂಚಿದ್ದಾರೆ.

ಬಾಂಗ್ಲಾದೇಶ ವಿರುದ್ಧ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದರು.

183 ಎಸೆತಗಳನ್ನು ಎದುರಿಸಿದ ಅಗರ್ವಾಲ್ 15 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಶತಕ ಪೂರೈಸಿದರು.

ಚೇತೇಶ್ವರ ಪೂಜಾರ(54) ಅವರೊಂದಿಗೆ 2ನೇ ವಿಕೆಟ್‌ಗೆ 91 ರನ್ ಜೊತೆಯಾಟದಲ್ಲಿ ಭಾಗಿಯಾದ ಮಾಯಾಂಕ್ ಅವರು ಅಜಿಂಕ್ಯ ರಹಾನೆ ಜೊತೆ 4ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 94 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ಯುತ್ತಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News