ಕೋಡಿ ಬ್ಯಾರೀಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Update: 2019-11-15 14:03 GMT

ಕುಂದಾಪುರ, ನ.15: ಕುಂದಾಪುರ ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ಶಾಲೆಯಲ್ಲಿ ಆಯೋಜಿಸಲಾಗಿತ್ತು.

ಬ್ಯಾರೀಸ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ಕೋರಿದರು.

ಬ್ಯಾರೀಸ್ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಧೊಮಾ ಚಂದ್ರಶೇಖರ್ ಮಾತನಾಡಿ, ಪ್ರತಿ ಮನುಷ್ಯನು ತನ್ನೊಳಗಿರುವ ಮಗುತನದ ಮುಗ್ದತೆಯನ್ನು ಕಾಪಾಡಿಕೊಳ್ಳಬೇಕು. ಇದು ಬದುಕಿನಲ್ಲಿ ಸದಾ ಚೈತನ್ಯದಿಂದ ಉಳಿಯುವುದಕ್ಕಿರುವ ದಾರಿ ಎಂದರು.

ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಫಿರ್ದೋಸ್, ಸಂಯೋಜಕಿ ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು. ಸಹಾಯಕ ಶಿಕ್ಷಕಿ ಅಫೀಫ ಸ್ವಾಗತಿಸಿದರು. ಜೆನಿಫರ್ ಲೂಯಿಸ್ ವಂದಿಸಿದರು. ಮಹಿಮ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News