ನ.16ರಂದು ಯುವಜನಾಂಗದ ಮೇಲೆ ಮಾದಕ ವಸ್ತುಗಳ ದುಷ್ಪರಿಣಾಮ; ವಿಚಾರಸಂಕಿರಣ

Update: 2019-11-15 14:15 GMT

ಉಡುಪಿ, ನ.15: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರ ಉದ್ಯಾವರ ಇವುಗಳ ಜಂಟಿ ಆಶ್ರಯದಲ್ಲಿ ಯುವ ಜನಾಂಗದ ಮೇಲೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ವಿಚಾರ ಸಂಕಿರಣವೊಂದು ನಾಳೆ ನ.16ರಂದು ಬೆಳಗ್ಗೆ 10 ಗಂಟೆಗೆ ಉದ್ಯಾವರದ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.

ವಿಚಾರ ಸಂಕಿರಣ ಪ್ರಯುಕ್ತ ನಡೆಯುವ ಜಾಥಾವನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಲಿದ್ದಾರೆ. ವಿಚಾರ ಸಂಕಿರಣವನ್ನು ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ಜೋನ್ ಜಿ.ಎಂ.ಡಿಸೋಜಾ ಉದ್ಘಾಟಿಸಲಿದ್ದು, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ನೀಲಿಮ ಕ್ರೆಸಲ್ ಅಧ್ಯಕ್ಷತೆ ವಹಿಸಿಲಿದ್ದಾರೆ.

ಯುವ ಜನಾಂಗದ ಮೇಲೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಎಸ್.ಡಿ.ಎಂ ಆರ್ಯುವೇದ ಕಾಲೇಜಿನ ನಿವೃತ್ತ ಪ್ರಾದ್ಯಾಪಕ ಡಾ. ಗಿರಿಧರ ಎಂ. ಉಪನ್ಯಾಸ ನೀಡಲಿದ್ದಾರೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News