ನ.18: ಪತ್ರಕರ್ತರಿಗೆ -ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ

Update: 2019-11-15 14:58 GMT

ಮಂಗಳೂರು, ನ.15: ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರು -ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ ನ.18ರಂದು ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆಯಲಿದೆ.

ಪೂರ್ವಾಹ್ನ 11 ಗಂಟೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರಿನಿವಾಸ್ ನಾಯಕ್ ಇಂದಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಅತಿಥಿಯಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ ಶೆಟ್ಟಿ ಭಾಗವಹಿಸಲಿ ದ್ದಾರೆ. ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಅವರನ್ನು ಈ ಸಂದರ್ಭ ಸನ್ಮಾನಿಸಲಾಗುವುದು.

ಮಧ್ಯಾಹ್ನ 12ರಿಂದ ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪುನಶ್ಚೇತನ ಕಾರ್ಯಾಗಾರದಲ್ಲಿ ‘ಮಾಧ್ಯಮ ಮತ್ತು ಭವಿಷ್ಯದ ಸವಾಲುಗಳು’ ಎಂಬ ವಿಷಯದಲ್ಲಿ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ‘ಮಾಧ್ಯಮ ಮತ್ತು ಮೌಲ್ಯಗಳು’ ಎಂಬ ವಿಷಯದ ಬಗ್ಗೆ ಉಜಿರೆ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಭಾಸ್ಕರ ಹೆಗ್ಡೆ ವಿಶೇಷ ಉಪನ್ಯಾಸ ನೀಡಲಿರುವರು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News