ಎಚ್.ವಿಶ್ವನಾಥ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ: ಸಿದ್ದರಾಮಯ್ಯ

Update: 2019-11-15 16:55 GMT

ಮೈಸೂರು,ನ.15: ಜಿಲ್ಲಾಡಳಿತ ಮತ್ತು ಕನಕದಾಸ ಜಯಂತ್ಯೋತ್ಸವ ಸಮಿತಿ ಆಯೋಜಿಸಿದ್ದ ಕನಕದಾಸರ ಮೆರವಣಿಗೆಗೆ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚಾಲನೆ ನೀಡಿದರು.

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಶುಕ್ರವಾರ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ವೇಳೆ ಭಾರೀ ನೂಕುನುಗ್ಗಲು ಉಂಟಾಗಿತ್ತು. ಸಿದ್ದರಾಮಯ್ಯ ಅವರು ಜನಜಂಗುಳಿಯ ಮಧ್ಯೆ ಸಿಲುಕಿದರು. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಟ್ಟರು. ಗುಂಪುಗೂಡಿದ್ದ ಜನರನ್ನು ಪೊಲೀಸರು ಚದುರಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದರು. ಮೈಸೂರು ನಗರ ಡಿಸಿಪಿ ಮುತ್ತುರಾಜ್ ಅವರು ಜನರದಟ್ಟಣೆಯನ್ನು ನಿಯಂತ್ರಿಸಿದರು. 

ಈ ವೇಳೆ ಸಿದ್ದರಾಮಯ್ಯ ನಾಡಿನ ಜನತೆಗೆ ಕನಕದಾಸರ ಜಯಂತಿಯ ಶುಭಾಶಯ ಕೋರಿದರು. ಇದೇ ವೇಳೆ ಮಾಧ್ಯಮಗಳು 'ದೇವರಾಜು ಅರಸು ಜೊತೆ ಮೋದಿಯನ್ನು ಸಮೀಕರಿಸಬೇಕು' ಎಂಬ ಎಚ್.ವಿಶ್ವನಾಥ್ ಹೇಳಿಕೆ ಕುರಿತಂತೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು. ಎಚ್.ವಿಶ್ವನಾಥ್ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೊರಟರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News