ಸಾಮಾಜಿಕ-ಆರ್ಥಿಕ ಸಮೀಕ್ಷಾ ವರದಿ ಜಾರಿಗೆ ಹಿಂದುಳಿದ ಜಾತಿಗಳ ಒಕ್ಕೂಟ ಮನವಿ

Update: 2019-11-15 17:09 GMT

ಬೆಂಗಳೂರು, ನ. 15: ರಾಜ್ಯ ಹಿಂದುಳಿದ ವರ್ಗಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು ಸ್ವೀಕರಿಸಿ, ತಕ್ಷಣವೇ ಜಾರಿಗೆ ತರಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ, ಹಿಂದುಳಿದ ಜಾತಿಗಳ ಒಕ್ಕೂಟ ಮನವಿ ಮಾಡಿದೆ.

ಶುಕ್ರವಾರ ಮಾಜಿ ಸಚಿವ ಎಚ್.ಎಂ.ರೇವಣ್ಣ, ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮಿ ನೇತೃತ್ವದ ನಿಯೋಗ ಇಲ್ಲಿನ ಡಾಲರ್ಸ್‌ ಕಾಲನಿಯಲ್ಲಿನ ಧವಳಗಿರಿಯಲ್ಲಿ ಬಿಎಸ್‌ವೈ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರದ್ದು ಸುತ್ತೋಲೆ ಕೂಡಲೇ ಹಿಂಪಡೆಯಬೇಕು. ಹಿಂದುಳಿದ ವರ್ಗದವರಿಗೆ ಒಟ್ಟು ಶೇ.32ರಷ್ಟು ಮೀಸಲಾತಿ ಇದ್ದು, ಆ ಪೈಕಿ ಪ್ರವರ್ಗ 2 ‘ಎ’ಗೆ ಶೇ.20ರಷ್ಟು ಹಾಗೂ ಪ್ರವರ್ಗ 1ಕ್ಕೆ ಶೇ.10ರಷ್ಟು ಮೀಸಲಾತಿ ಹೆಚ್ಚಳ ಮಾಡಬೇಕು. ಪ್ರವರ್ಗ 2 ಎ ಮತ್ತು ಪ್ರವರ್ಗ 1ರ ಗುಂಪುಗಳಿಗೆ ಹೆಚ್ಚುವರಿಯಾಗಿ ಬೇರೆ ಜಾತಿಗಳನ್ನು ಸೇರಿಸಬಾರದು ಎಂದು ಆಗ್ರಹಿಸಲಾಗಿದೆ.

ಚರ್ಚಿಸುವ ಭರವಸೆ: ಹಿಂ.ವರ್ಗಗಳ ಆಯೋಗದ ಸಮೀಕ್ಷಾ ವರದಿ ಜಾರಿ, ಮೀಸಲಾತಿ ಹೆಚ್ಚಳ ಸಂಬಂಧ ಶೀಘ್ರದಲ್ಲೆ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ವೆಂಕಟರಾಮಯ್ಯ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News